10 ನೇ ತರಗತಿ ವಿದ್ಯಾರ್ಥಿನಿ 12 ನೇ ಮಹಡಿಯಿಂದ ಹಾರಿ ಆತ್ಮಹತ್ಯೆ

ಬೆಂಗಳೂರು: ಎಸ್ಎಸ್ಎಲ್ ಸಿ  ವಿದ್ಯಾರ್ಥಿನಿಯೊಬ್ಬಳು 12ನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ



ರಾಜಧಾನಿ ಬೆಂಗಳೂರಿನ ಬೆಳ್ಳಂದೂರಿನ ಅಪಾರ್ಟ್​ಮೆಂಟ್​ನಲ್ಲಿ  ಈ ಘಟನೆ ನಡೆದಿದೆ. ಖಾಸಗಿ ಶಾಲೆಯಲ್ಲಿ ಎಸ್ ಎಸ್ ಎಲ್ ಸಿ ಯಲ್ಲಿ ವ್ಯಾಸಂಗ ಮಾಡುತ್ತಿದ್ದ ಜೆಸ್ಸಿಕಾ (15) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ.


ಈಕೆ ಇಲ್ಲಿನ ಅಪಾರ್ಟ್​ಮೆಂಟ್​ವೊಂದರ  ಹನ್ನೊಂದನೇ ಮಹಡಿಯಲ್ಲಿ ಕಳೆದ 2 ವರ್ಷಗಳಿಂದ ತಂದೆ-ತಾಯಿ ಜೊತೆ ವಾಸವಿದ್ದಳು. ಇವರು ಮೂಲತಃ ತಮಿಳುನಾಡಿನವರಾಗಿದ್ದು, ತಂದೆ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾರೆ.




ಈಕೆ ಇಂದು ಬೆಳಗ್ಗೆ 10.30ರ ಸುಮಾರಿಗೆ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ  ಹನ್ನೆರಡನೇ ಮಹಡಿಗೆ ಹೋಗಿ ಅಲ್ಲಿಂದ ಹಾರಿ ಪ್ರಾಣ ಕಳೆದುಕೊಂಡಿದ್ದಾಳೆ.  ಬೆಳ್ಳಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.