-->
ಆಗಷ್ಟ್ 26 ರಂದು ಡಾ. ಎ. ಸದಾನಂದ ಶೆಟ್ಟಿ ಅವರಿಗೆ ಅಭಿನಂದನಾ ಸಮಾರಂಭ

ಆಗಷ್ಟ್ 26 ರಂದು ಡಾ. ಎ. ಸದಾನಂದ ಶೆಟ್ಟಿ ಅವರಿಗೆ ಅಭಿನಂದನಾ ಸಮಾರಂಭ

ಮಂಗಳೂರು: ಶಿವಮೊಗ್ಗದ ಕುವೆಂಪು ವಿಶ್ವವಿದ್ಯಾನಿಲಯದಿಂದ ಗೌರವ ಡಾಕ್ಟರೇಟ್ ಪದವಿ ಪುರಸ್ಕೃತರಾದ ಶ್ರೀದೇವಿ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ. ಎ. ಸದಾನಂದ ಶೆಟ್ಟಿ ಅವರಿಗೆ ಸಾರ್ವಜನಿಕ ಅಭಿನಂದನಾ ಸಮಾರಂಭ  ಆಗಷ್ಟ್ 26 ರಂದು ಸಾಯಂಕಾಲ 4ಕ್ಕೆ ಮಂಗಳೂರಿನ ಕುದ್ಮುಲ್ ರಂಗರಾವ್, ಪುರಭವನದಲ್ಲಿ ನಡೆಯಲಿದೆ ಎಂದು ಡಾ. ಎ. ಸದಾನಂದ ಶೆಟ್ಟಿ  ಸಾರ್ವಜನಿಕ ಅಭಿನಂದನಾ ಸಮಾರಂಭ ಸಮಿತಿ ಅಧ್ಯಕ್ಷ ರವೀಂದ್ರನಾಥ ರೈ ತಿಳಿಸಿದರು.ಪತ್ರಿಕಾಗೋಷ್ಠಿ ಮಾತನಾಡಿದ ಅವರು ಕಾರ್ಯಕ್ರಮದಲ್ಲಿ ದ.ಕ. ಸಂಸದ ನಳಿನ್‌ಕುಮಾರ್ ಕಟೀಲ್ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ. ಮಾಜಿ ಮುಖ್ಯಮಂತ್ರಿ ಡಾ. ಎಂ. ವೀರಪ್ಪ ಮೊಯ್ಲಿ ಅಭಿನಂದನಾ ಭಾಷಣ ಮಾಡಲಿದ್ದಾರೆ. ಕರ್ನಾಟಕ ವಿಧಾನಸಭೆಯ ಸ್ಪೀಕರ್ ಯು.ಟಿ. ಖಾದರ್, ಮಂಗಳೂರು ಮಹಾ ನಗರ ಪಾಲಿಕೆಯ ಮೇಯರ್ ಜಯಾನಂದ ಅಂಚನ್, ಶಾಸಕರಾದ ಡಿ. ವೇದವ್ಯಾಸ ಕಾಮತ್, ಡಾ. ವೈ. ಭರತ್ ಶೆಟ್ಟಿ, ಮಾಜಿ ಸಚಿವರಾದ ಬಿ. ರಮಾನಾಥ ರೈ, ಅಭಯಚಂದ್ರ ಜೈನ್, ನಿಟ್ಟೆ ವಿ.ವಿ.ಯ ಕುಲಾಧಿಪತಿ ಡಾ. ಎನ್. ವಿನಯ ಹೆಗ್ಡೆ, ಮಂಗಳೂರು ಬಿಷಪ್ ಡಾ. ಪೀಟರ್ ಪೌಲ್ ಸಲ್ದಾನ, ಕದ್ರಿ ಶ್ರೀ ಮಂಜುನಾಥೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಡಾ. ಎ.ಜೆ. ಶೆಟ್ಟಿ, ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ, ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, ಮುಂಬೈಯ ಉದ್ಯಮಿ ಪಾದೆ ಅಜಿತ್ ರೈ, ಸಂಗೀತ ನಿರ್ದೇಶಕ ಗುರುಕಿರಣ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.ಇಂಟರ್ ನೇಶನಲ್ ಬಂಟ್ಸ್ ವೆಲ್ಫೇರ್ ಟ್ರಸ್ಟ್ನ ಅಧ್ಯಕ್ಷ, ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಅಭಿನಂದನಾ ಸಮಿತಿಯ ಗೌರವಾಧ್ಯಕ್ಷ, ಎಂ.ಆರ್.ಜಿ. ಗ್ರೂಪ್‌ನ ವ್ಯವಸ್ಥಾಪಕ ನಿರ್ದೇಶಕ ಕೆ. ಪ್ರಕಾಶ್ ಶೆಟ್ಟಿ ಉಪಸ್ಥಿತರಿರುವರು. ಸಮಾರಂಭದ ಅಂಗವಾಗಿ ಮಧ್ಯಾಹ್ನ 3ಕ್ಕೆ ಪ್ರಸಿದ್ಧ ಗಾಯಕರಿಂದ ಸುಗಮ ಸಂಗೀತ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು.
ಪತ್ರಿಕಾಗೋಷ್ಠಿ ಯಲ್ಲಿ ಸಮಿತಿಯ  ಪ್ರಧಾನ ಕಾರ್ಯದರ್ಶಿ ಈಶ್ವರ್ ಕಟೀಲ್,  ಕಾರ್ಯದರ್ಶಿ ಪುರುಷೋತ್ತಮ ಪೂಜಾರಿ, ಉಪಾಧ್ಯಕ್ಷರಾದ ಎನ್.ಜೆ.ನಾಗೇಶ್ , ಸತೀಶ್ ಕುಮಾರ್ ಕುದ್ರೋಳಿ, ಎ.ಉಮೇಶ್ ಗಟ್ಟಿ, ಸಂಚಾಲಕರಾದ. ಲೀಲಾಕ್ಷ ಕರ್ಕೇರ  ಪಿ.ಬಿ.ಹರೀಶ್ ರೈ, ಜಗನ್ನಾಥ ಶೆಟ್ಟಿ ಬಾಳ, ಪ್ರಕಾಶ್ ಕಾರಂತ್, ಡಿ.ಎಂ.ಅಸ್ಲಂ ಉಪಸ್ಥಿತರಿದ್ದರು.


Ads on article

Advertise in articles 1

advertising articles 2

ಉಚಿತವಾಗಿ ಸುದ್ದಿ ಕೊಡುತ್ತಿರುವ ನಮಗೆ ಸಹಾಯ ಮಾಡಿ

  

Pay Rs 100

  

Advertise under the article