ಬ್ಯಾಂಕ್ ಉದ್ಯೋಗಿ 30 ವರ್ಷದ ಶೃತಿ ಆತ್ಮಹತ್ಯೆ





ಮಂಡ್ಯ: ಜೀವನದಲ್ಲಿ ಜಿಗುಪ್ಪೆಗೊಂಡು ನಗರದ ಕಾವೇರಿ ಗ್ರಾಮೀಣ ಬ್ಯಾಂಕ್‌ನ ಪ್ರಾದೇಶಿಕ ಕಚೇರಿ ಉದ್ಯೋಗಿ ಶೃತಿ(30) ಎಂಬುವರು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ‌ನಡೆದಿದೆ.

ನಗರದ ವಿನಾಯಕ ಬಡಾವಣೆಯ ಬಾಡಿಗೆ ಮನೆಯಲ್ಲಿ ಅವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಐಎಎಸ್ ಕನಸು ಮತ್ತು ಜೀವನದ ವೈಫಲ್ಯ ಸಾವಿಗೆ ಕಾರಣ ಎಂದು ಅವರು ಡೆತ್ ನೋಟ್ ನಲ್ಲಿ ಬರೆದಿದ್ದಾರೆ ಎನ್ನಲಾಗಿದೆ.

ಕೊಳ್ಳೇಗಾಲದ ಮಲ್ಲಪ್ಪ ಅವರ ಪುತ್ರಿಯಾದ ಶೃತಿ, ಕಾವೇರಿ ಗ್ರಾಮೀಣ ಬ್ಯಾಂಕ್‌ನ ಉದ್ಯೋಗಿಯಾಗಿ ನೇಮಕಗೊಂಡು ಚಿಕ್ಕಮಗಳೂರಿನ ಶಾಖೆಯಲ್ಲಿ ಕಳೆದ ಏಳು ವರ್ಷ ಕಾರ್ಯನಿರ್ವಹಿಸಿ ಮಂಡ್ಯದ ಪ್ರಾದೇಶಿಕ ಕಚೇರಿಗೆ ಎರಡು ತಿಂಗಳ ಹಿಂದೆ ಬಂದಿದ್ದರು.



ಅವಿವಾಹಿತರಾಗಿದ್ದ ಶೃತಿ, ವಿನಾಯಕ ಬಡಾವಣೆಯ ರಾಜಣ್ಣ ಎಂಬುವರ ಮನೆಯನ್ನು ಬಾಡಿಗೆಗೆ ಪಡೆದು ವಾಸವಿದ್ದರು. ರವಿವಾರ ತಡರಾತ್ರಿ ತಂದೆ ಮಲ್ಲಪ್ಪರಿಗೆ ಕರೆ ಮಾಡಿ ತಾನು ದೇವರ ಬಳಿ ಹೋಗುತ್ತಿದ್ದೇನೆ, ನನ್ನನು ಕಮಿಸಿ ಎಂದು ಹೇಳಿ ಕರೆ ಕಡಿತ ಮಾಡಿದ್ದಾರೆ ಎನ್ನಲಾಗಿದೆ



ತಕ್ಷಣ ಮಲ್ಲಪ್ಪ ಕರೆ ಮಾಡಿದಾಗ ಮೊಬೈಲ್ ಸ್ವಿಚ್ ಆಫ್ ಆಗಿದ್ದು, ಮಂಡ್ಯದಲ್ಲಿರುವ ಸಂಬಂಧಿಕರಿಗೆ ವಿಚಾರ ತಿಳಿಸಿದ್ದಾರೆ. ಸಂಬಂಧಿಕರು ಮನೆಯ ಬಳಿ ಹೋಗಿ ನೋಡಿದಾಗ ಅಷ್ಟರಲ್ಲಿ ನೇಣು ಬಿಗಿದುಕೊಂಡಿದ್ದರು ಎಂದು ವರದಿಯಾಗಿದೆ.

ಗ್ರಾಮಾಂತರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

BREAKING NEWS
Loading latest news...
Join our WhatsApp Channel Powered By : Online Pudu