ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಖಾಸಗಿ ಶಾಲೆಯೊಂದರಲ್ಲಿ, 8ನೇ ತರಗತಿ ವಿದ್ಯಾರ್ಥಿನಿ ಮೇಲೆ 33 ವರ್ಷದ ಶಿಕ್ಷಕ ನಿರಂತರ ಅತ್ಯಾಚಾರ ನಡೆಸಿದ ಆರೋಪ ಕೇಳಿಬಂದಿದೆ.
ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಖಾಸಗಿ ಶಾಲೆಯೊಂದರಲ್ಲಿ, ಎಂಟನೇ ತರಗತಿ ವಿದ್ಯಾರ್ಥಿನಿ ಮೇಲೆ 33 ವರ್ಷದ ಶಿಕ್ಷಕ ನಿರಂತರ ಅತ್ಯಾಚಾರ ನಡೆಸಿದ ಆರೋಪ ಕೇಳಿಬಂದಿದೆ. ಈ ಘಟನೆಗೆ ಸಂಬಂಧಪಟ್ಟಂತೆ ಆರೋಪಿ ಶಿಕ್ಷಕನನ್ನು ಪೊಲೀಸರು ಬಂಧಿಸಿದ್ದು, ಪೋಕ್ಸೋ ಕಾಯಿದೆಯಡಿ ಪ್ರಕರಣ ದಾಖಲು ಮಾಡಿ, ವಶಕ್ಕೆ ಪಡೆಯಲಾಗಿದೆ. ಈ ಘಟನೆ ಗೌನಿಪಲ್ಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.