-->
1000938341
ಟ್ಯೂಷನ್ ಮುಗಿಸಿ ಮನೆಗೆ ಮರಳುತ್ತಿದ್ದ ಇಬ್ಬರು ಮಕ್ಕಳು ದಾರುಣ ಸಾವು: ಮೂವರು ಗಂಭೀರ

ಟ್ಯೂಷನ್ ಮುಗಿಸಿ ಮನೆಗೆ ಮರಳುತ್ತಿದ್ದ ಇಬ್ಬರು ಮಕ್ಕಳು ದಾರುಣ ಸಾವು: ಮೂವರು ಗಂಭೀರ

ರಾಮನಗರ: ಟ್ಯೂಷನ್​ ಮುಗಿಸಿ ರಸ್ತೆಬದಿಯಲ್ಲಿ ನಡೆದುಕೊಂಡು ಮನೆಗೆ ನಡೆದುಕೊಂಡು ಮರಳುತ್ತಿದ್ದ ಮಕ್ಕಳಿಬ್ಬರು ಅಪಘಾತದಲ್ಲಿ ದಾರುಣವಾಗಿ ಸಾವಿಗೀಡಾದ ಪ್ರಕರಣವೊಂದು ರಾಮನಗರ ಜಿಲ್ಲೆಯಲ್ಲಿ ನಡೆದಿದೆ. ಘಟನೆಯಲ್ಲಿ ಉಳಿದ ಮೂವರು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದಾರೆ.

ರಾಮನಗರ ತಾಲೂಕಿನ ಗೊಲ್ಲರದೊಡ್ಡಿ ಗ್ರಾಮದಲ್ಲಿ ಈ ದುರ್ಘಟನೆ ಸಂಭವಿಸಿದೆ. ರೋಹಿತ್ (5), ಶಾಲಿನಿ (8) ಮೃತಪಟ್ಟ ಮಕ್ಕಳು. ಸುಚಿತ್, ಗೌತಮಿ, ಲೇಖನ ಎಂಬ ಮೂವರು ಮಕ್ಕಳಿಗೆ ಗಂಭೀರ ಗಾಯಗಳಾಗಿವೆ.

ಟ್ಯೂಷನ್ ಮುಗಿಸಿ ಮನೆಗೆ ಮರಳುತ್ತಿದ್ದ ಈ ಮಕ್ಕಳಿಗೆ ಗೂಡ್ಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಈ ಸಾವು-ನೋವುಗಳಾಗಿವೆ. ಗಾಯಗೊಂಡ ಮಕ್ಕಳನ್ನು ರಾಮನಗರ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇಬ್ಬರು ಚಿಕಿತ್ಸೆ ಫಲಿಸದೆ ಸಾವಿಗೀಡಾದ್ದಾರೆ. ಉಳಿದ ಮಕ್ಕಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಮಕ್ಕಳಿಗೆ ಗೂಡ್ಸ್ ವಾಹನ ಗುದ್ದಿದ ಬಳಿಕವೂ ಚಾಲಕ​ ವಾಹನ ಸಮೇತ ಪರಾರಿಯಾಗಿದ್ದಾನೆ. ಬಳಿಕ ಬೇರೆಡೆ ವಾಹನ ನಿಲ್ಲಿಸಿ ತಲೆಮರೆಸಿಕೊಂಡಿದ್ದಾನೆ. ಆಸ್ಪತ್ರೆಗೆ ಎಎಸ್​​ಪಿ ಸುರೇಶ್ ಭೇಟಿ ನೀಡಿದ್ದು, ಅಪಘಾತದ ಕುರಿತು ಮಾಹಿತಿ ಸಂಗ್ರಹಿಸಿದ್ದಾರೆ. ರಾಮನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ads on article

Advertise in articles 1

advertising articles 2

Advertise under the article