ಪುತ್ತೂರು: ಬಾಲಕಿಗೆ ಲೈಂಗಿಕ ಕಿರುಕುಳ: ಆರೋಪಿಯ ಬಂಧನ


ಪುತ್ತೂರು: ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿ ವಿರುದ್ಧ ಪುತ್ತೂರಿನ ಮಹಿಳಾ ಠಾಣೆಯಲ್ಲಿ ಎಫ್‌ಐಆರ್  ದಾಖಲಾಗಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

'ಆಜುದ್ದೀನ್, ಅಲಿಯಾಸ್ ತಾಜು ಅಲಿಯಾಸ್ ಮಹಮ್ಮದ್ ತಾಜುದ್ದೀನ್ (33) ಬಂಧಿತ ಆರೋಪಿ. ಆತ ಲೈಂಗಿಕ ಕಿರುಕುಳ ನೀಡಿದ ಬಗ್ಗೆ ಬಾಲಕಿಯೊಬ್ಬಳು ದೂರು ನೀಡಿದ್ದು, ಲೈಂಗಿಕ ದೌರ್ಜನ್ಯದಿಂದ ಮಕ್ಕಳ ರಕ್ಷಣೆ - ಕಾಯ್ದೆಯಡಿ ಮೊಕದ್ದಮೆ ದಾಖಲಾಗಿತ್ತು' ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.



“ಆರೋಪಿಯು ತಲೆ ಮರೆಸಿಕೊಂಡಿದ್ದ. ಮಹಿಳಾ ಠಾಣೆಯ ಪಿಎಸ್‌ಐ ಭವಾನಿ ಮತ್ತು ಸಿಬ್ಬಂದಿ ಹರೀಶ್, ಸುಜಿನ್ ಮತ್ತು ಕುಮಾರಸ್ವಾಮಿ ಅವರನ್ನೊಳಗೊಂಡ ತಂಡವು ಆತನನ್ನು ಚಿಕ್ಕಮಗಳೂರು ಜಿಲ್ಲೆಯ ಕಳಸದಲ್ಲಿ ಪತ್ತೆ ಮಾಡಿ ಬಂಧಿಸಿತ್ತು' ಎಂದು ಅವರು ತಿಳಿಸಿದ್ದಾರೆ.

“ಆರೋಪಿ ವಿರುದ್ಧ ಕೊಲೆ, ಮಾನಭಂಗ, ಅಕ್ರಮ ಗೋಸಾಗಣೆ ಸೇರಿದಂತೆ ಒಟ್ಟು 19 ಪ್ರಕರಣಗಳು ಬೆಳ್ತಂಗಡಿ, ಧರ್ಮಸ್ಥಳ, ಮಂಗಳೂರು ಪೊಲೀಸ್ ಠಾಣೆಗಳಲ್ಲಿ ದಾಖಲಾಗಿದ್ದವು' ಎಂದು ಅವರು ಮಾಹಿತಿ ನೀಡಿದರು.