ಮಂಗಳೂರು: ವೆನ್ಲಾಕ್ ಆಸ್ಪತ್ರೆಯಿಂದ ತಪ್ಪಿಸಿ ಪರಾರಿಯಾಗಿದ್ದ ವಿಚಾರಣಾಧೀನ ಕೈದಿ ಅರೆಸ್ಟ್


ಮಂಗಳೂರು: ಅನಾರೋಗ್ಯದಿಂದ ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ತೆಯಲ್ಲಿದ್ದ ವೇಳೆಯೇ ಪರಾರಿಯಾಗಿದ್ದ ವಿಚಾರಣಾಧೀನ ಕೈದಿಯನ್ನು ಮಂಗಳೂರು ದಕ್ಷಿಣ ಪೊಲೀಸರು ಹೆಡೆಮುರಿಕಟ್ಟಿ ಬಂಧಿಸಿದ್ದಾರೆ.

ಬಂಟ್ವಾಳದ ಸಜಿಪ ನಡು ನಿವಾಸಿ ಎಸ್.ಎಮ್ ನೌಫಾಲ್(32) ಬಂಧಿತ ಆರೋಪಿ.

ಎಸ್.ಎಮ್ ನೌಫಾಲ್ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಎನ್ ಡಿಪಿಎಸ್ ಕಾಯ್ದೆಯನ್ವಯ ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ. ಆದರೆ ಈತನಿಗೆ ಅನಾರೋಗ್ಯವಿದ್ದ ಹಿನ್ನೆಲೆಯಲ್ಲಿ ಚಿಕಿತ್ಸೆಗಾಗಿ ಪೊಲೀಸ್ ಭದ್ರತೆಯಲ್ಲಿ ಸರಕಾರಿ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಆದರೆ ನೌಫಾಲ್ ಆಗಸ್ಟ್ 16ರಂದು 5.06ಕ್ಕೆ ಪೊಲೀಸ್ ಭದ್ರತೆಯಿದ್ದರೂ ವೆನ್ಲಾಕ್ ಆಸ್ಪತ್ರೆಯಿಂದ ತಪ್ಪಿಸಿಕೊಂಡು ಪರಾರಿಯಾಗಿದ್ದನು. ಈ ಬಗ್ಗೆ ಪೊಲೀಸ್ ಗಾರ್ಡ್ ಕರ್ತವ್ಯದಲ್ಲಿದ್ದ ಸಚಿನ್ ಕೆ.ಎಸ್ ರವರು ನೀಡಿರುವ ದೂರಿನಂತೆ ಮಂಗಳೂರು ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆಗಸ್ಟ್ 19ರಂದು ಮಂಗಳೂರು ದಕ್ಷಿಣ ಪೊಲೀಸ್ ಠಾಣಾ ಪಿ.ಎಸ್.ಐ ಮನೋಹರ್ ಪ್ರಸಾದ್‌ ಹಾಗೂ ಸಿಬ್ಬಂದಿ ಆರೋಪಿಯನ್ನು ದಸ್ತಗಿರಿ ಮಾಡಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ. ಆರೋಪಿಯು ನ್ಯಾಯಾಂಗ ಬಂಧನದಲ್ಲಿದ್ದಾನೆ.
BREAKING NEWS
Loading latest news...
Join our WhatsApp Channel Powered By : Online Pudu