ಬಂಟ್ವಾಳದಲ್ಲಿ ಯುವತಿ ಸ್ನಾನ ಮಾಡುತ್ತಿದ್ದಾಗ ಮೊಬೈಲ್ ನಲ್ಲಿ ವಿಡಿಯೋ ಚಿತ್ರೀಕರಣ- ದೂರು ದಾಖಲು

ಮಂಗಳೂರು: ಯುವತಿ ಯೊಬ್ಬಳು ಸ್ನಾನ ಮಾಡುತ್ತಿದ್ದ ವೇಳೆ ಅಪರಿಚಿತ ವ್ಯಕ್ತಿಯೊಬ್ಬ ಮೊಬೈಲ್ ನಲ್ಲಿ ವಿಡಿಯೋ ಚಿತ್ರೀಕರಣ ಮಾಡಿರುವ ಬಗ್ಗೆ ಯುವತಿ ಬಂಟ್ವಾಳ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ.


ಆಗಷ್ಟ್ 28  ರಂದು ರಾತ್ರಿ ಯುವತಿ ಎಂದಿನಂತೆ ತಮ್ಮ ಹಂಚಿನ ಮನೆಯೊಳಗಿರುವ ಬಚ್ಚಲು ಕೋಣೆಯಲ್ಲಿ ಸ್ನಾನ ಮಾಡುತ್ತಿರುವಾಗ ಯಾರೋ ಅಪರಿಚಿತ ವ್ಯಕ್ತಿಯೋರ್ವ ಹೊರಗಡೆಯಿಂದ ಗೋಡೆಯ ಸೆರೆಯ ಮದ್ಯೆ ತನ್ನ ಮೊಬೈಲ್ ಮೂಲಕ ವಿಡಿಯೋ ಮಾಡುತ್ತಿದ್ದ.ಯುವತಿ ಸ್ನಾನ ಮಾಡುತ್ತಿರುವುದನ್ನು ಸೆರೆ ಹಿಡಿಯುವುದನ್ನು ಗಮನಿಸಿ ತಕ್ಷಣ  ಬೊಬ್ಬೆ ಹಾಕಿದ್ದಾರೆ. ಆಗ   ಆ ವ್ಯಕ್ತಿಯು  ಅಲ್ಲಿಂದ  ಓಡಿಹೋಗಿರುತ್ತಾನೆ. 


ಬಳಿಕ ಯುವತಿಯ ಬೊಬ್ಬೆ ಕೇಳಿ ತಾಯಿ ಹಾಗೂ ಅಕ್ಕಪಕ್ಕದ ಮನೆಯವರು ಬಂದು ಓಡಿ ಹೋದ  ಅಪರಿಚಿತ ವ್ಯಕ್ತಿಯ ಹುಡುಕಾಟ ಮಾಡಿದಾಗ ಈ ವ್ಯಕ್ತಿಯು ಕಂಡು ಬಂದಿರುವುದಿಲ್ಲ ಎಂಬುದಾಗಿ ನೀಡಿದ ದೂರಿನ ಮೇರೆಗೆ  ಬಂಟ್ವಾಳ ನಗರ ಠಾಣೆಯಲ್ಲಿ ಕಲಂ: 354 (D), 354 (C) ಐಪಿಸಿ ಯಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.
BREAKING NEWS
Loading latest news...
Join our WhatsApp Channel Powered By : Online Pudu