ಸುರತ್ಕಲ್: ಚರಂಡಿ ಕಾಮಗಾರಿ ವೇಳೆ ಕಂಪೌಂಡ್ ಗೋಡೆ ಕುಸಿತ - ಓರ್ವ ಸಾವು, ಮತ್ತೋರ್ವ ಗಾಯ


ಸುರತ್ಕಲ್: ರಸ್ತೆ ಬದಿಯಲ್ಲಿ ಚರಂಡಿ ಕೆಲಸ ಮಾಡುತ್ತಿದ್ದ ಸಂದರ್ಭ ಕಂಪೌಂಡ್ ಕುಸಿದು ಓರ್ವ ಮೃತಪಟ್ಟು, ಮತ್ತೋರ್ವ ಗಾಯಗೊಂಡಿರುವ ಘಟನೆ ಸುರತ್ಕಲ್ ಬಳಿಯ ಕೃಷ್ಣಾಪುರದ ಕೆಇಬಿ ಬಳಿ ಬುಧವಾರ ನಡೆದಿದೆ.

 ಬಜ್ಪೆ ಕರಂಬಾರು ನಿವಾಸಿ ಹನೀಫ್ ಮೃತಪಟ್ಟ ವ್ಯಕ್ತಿ. ಮಣಿ ಎಂಬವರು ಗಾಯಗೊಂಡವರು. 


ಕೃಷ್ಣಾಪುರದ ನಿವಾಸಿ ಶರೀಫ್ ಎಂಬವರು ರಸ್ತೆ ಬದಿಯ ಚರಂಡಿ ನಿರ್ಮಾಣದ ಕಾಮಗಾರಿ ಗುತ್ತಿಗೆ ಪಡೆದು ಕೆಲಸ ಮಾಡಿಸುತ್ತಿದ್ದರು. ಹನೀಫ್ ಮತ್ತು ಮಣಿ ಚರಂಡಿ ಅಗೆಯುತ್ತಿದ್ದರು. ಈ ವೇಳೆ ಏಕಾಏಕಿ ಪಕ್ಕದಲ್ಲಿದ್ದ ಕಾಂಪೌಂಡ್ ಗೋಡೆ ಕುಸಿದು ಕೆಲಸ ಮಾಡುತ್ತಿದ್ದ ಇಬ್ಬರ ಮೇಲೆಯೇ ಬಿದ್ದಿದೆ. ಪರಿಣಾಮ ಇಬ್ಬರೂ ಗಂಭೀರ ಗಾಯಗೊಂಡಿದ್ದಾರೆ. ತಕ್ಷಣ ಅವರನ್ನು ಸಮೀಪದ ಆಸ್ಪತ್ರೆಗೆ ಸಾಗಿಸಿದ್ದಾರೆ. ಅಷ್ಟರಲ್ಲಾಗಲೇ ಹನೀಫ್‌ ಮೃತಪಟ್ಟಿದ್ದರು ಎಂದು ತಿಳಿದು ಬಂದಿದೆ.

ಮಣಿ ಅವರಿಗೆ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಬಳಿಕ ಮುಕ್ಕದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ತಿಳಿದು ಬಂದಿದೆ. ಹನೀಫ್ ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನೆಗೆ ಸಂಬಂಧಿಸಿ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
BREAKING NEWS
Loading latest news...
Join our WhatsApp Channel Powered By : Online Pudu