10 ಸಾವಿರ ಅತಿಥಿ ಶಿಕ್ಷಕರ ನೇಮಕಾತಿ: ಸಿಹಿ ಸುದ್ದಿ ನೀಡಿ ಪ್ರಕಟಣೆ ಹೊರಡಿಸಿದ ಇಲಾಖೆ
Saturday, August 19, 2023
10 ಸಾವಿರ ಅತಿಥಿ ಶಿಕ್ಷಕರ ನೇಮಕಾತಿ: ಸಿಹಿ ಸುದ್ದಿ ನೀಡಿ ಪ್ರಕಟಣೆ ಹೊರಡಿಸಿದ ಇಲಾಖೆ
ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ 10 ಸಾವಿರ ಹೆಚ್ಚುವರಿ ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಕಟಣೆ ಹೊರಡಿಸಿದೆ.
ಈ ಹಿಂದೆ, ಮೊದಲ ಬಾರಿ ನಡೆದ ವರ್ಗಾವಣೆಯ ಪ್ರಯೋಜನವನ್ನು ರಾಜ್ಯದ ಸರ್ಕಾರಿ ಶಾಲೆಗಳ 30629 ಶಿಕ್ಷಕರು ಪಡೆದಿದ್ದರು.
ಶಿಕ್ಷಕರ ವರ್ಗಾವಣೆಯ ನಂತರ ತೆರವಾದ ಸ್ಥಾನಗಳಿಗೆ ಮತ್ತೆ 15 ಸಾವಿರ ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳಲು ಅನುಮತಿ ಕೋರಿ ಶಾಲಾ ಶಿಕ್ಷಣ ಇಲಾಖೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆಯನ್ನು ಸಲ್ಲಿಸಿತ್ತು.
ಇದೀಗ 10 ಸಾವಿರ ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳಲು ಆರ್ಥಿಕ ಇಲಾಖೆ ಅನುಮತಿ ನೀಡಿದೆ. ಇದು ಸಹಜವಾಗಿಯೇ ಅತಿಥಿ ಶಿಕ್ಷಕರ ಪಾಲಿಗೆ ಸಿಹಿ ಸುದ್ದಿಯಾಗಿದೆ.