ಬೆಂಗಳೂರು: ಸ್ಯಾಂಡಲ್ ವುಡ್ ನಟ ವಿಜಯರಾಘವೇಂದ್ರರಿಗೆ ಪತ್ನಿ ವಿಯೋಗ - ಬ್ಯಾಂಕಾಕ್ ನಲ್ಲಿ ಸ್ಪಂದನಾ ಹೃದಯಾಘಾತದಿಂದ ಸಾವು
Monday, August 7, 2023
ಬೆಂಗಳೂರು: ಸ್ಯಾಂಡಲ್‌ವುಡ್ ನಟ ವಿಜಯರಾಘವೇಂದ್ರ ಅವರ ಪತ್ನಿ ಸ್ಪಂದನಾ ಬ್ಯಾಂಕಾಕ್ ನಲ್ಲಿ ಹೃದಯಾಘಾತದಲ್ಲಿ ಮೃತಪಟ್ಟಿದ್ದಾರೆ.
ಬ್ಯಾಂಕಾಕ್‌ನಲ್ಲಿದ್ದ ಸ್ಪಂದನಾ ಅವರು ಏಕಾಏಕಿ ಹೃದಯಾಘಾತವಾಗಿ ನಿಧನರಾಗಿದ್ದಾರೆ. ಸದ್ಯ ಅವರಿಗೆ ಲೋ ಬಿಪಿ ಹಾಗೂ ಹೃದಯಾಘಾತ ಆಗಿತ್ತು ಎಂಬ ಮಾಹಿತಿ ಲಭ್ಯವಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.
ಪೊಲೀಸ್ ಅಧಿಕಾರಿ ಶಿವರಾಂಅವರ ಪುತ್ರಿ ಸ್ಪಂದನಾರನ್ನು ನಟ ವಿಜಯ ರಾಘವೇಂದ್ರ 2007, ಆಗಸ್ಟ್ 26ರಲ್ಲಿ ಪ್ರೀತಿಸಿ ವಿವಾಹವಾಗಿದ್ದರು. ಇನ್ನೇನು ಇವರ 16ನೇ ವಿವಾಹ ವಾರ್ಷಿಕೋತ್ಸವಕ್ಕೆ ಕೇವಲ 19 ದಿನಗಳು ಬಾಕಿಯಿದೆ. ಈ ಸಂದರ್ಭದಲ್ಲೇ ಇಂತಹ ದುರಂತ ನಡೆದಿರುವುದು ಬಹಳ ಆಘಾತಕಾರಿ ಸಂಗತಿಯಾಗಿದೆ.
ವಿಜಯರಾಘವೇಂದ್ರ ಹಾಗೂ ಸ್ಪಂದನಾ ದಂಪತಿಗೆ ಶೌರ್ಯ ಎಂಬ ಓರ್ವ ಪುತ್ರನಿದ್ದಾನೆ. 2016ರಲ್ಲಿ ಬಿಡುಗಡೆಯಾದ ಅಪೂರ್ವ ಸಿನಿಮಾದಲ್ಲಿ ಸ್ಪಂದನಾ ಅತಿಥಿ ಪಾತ್ರದಲ್ಲಿ ನಟಿಸಿದ್ದರು.