
ಕರ್ನಾಟಕ ಬ್ಯಾಂಕ್‌ನಲ್ಲಿ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ಕರ್ನಾಟಕ ಬ್ಯಾಂಕ್‌ನಲ್ಲಿ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ದೇಶದ ಪ್ರತಿಷ್ಠಿತ ಖಾಸಗಿ ಬ್ಯಾಂಕ್‌ಗಳಲ್ಲಿ ಮುಂಚೂಣಿಯಲ್ಲಿ ಇರುವ ಕರ್ನಾಟಕ ಬ್ಯಾಂಕ್‌ನಲ್ಲಿ ಖಾಲಿ ಇರುವ ಪ್ರೊಬೇಷನರಿ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಲಾಗಿದೆ.
ಆಗಸ್ಟ್ 12, 2023ರಿಂದ ಅರ್ಜಿ ಸಲ್ಲಿಸಲು ಪ್ರಕ್ರಿಯೆ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಆಗಸ್ಟ್ 26, 2023 ಆಗಿರುತ್ತದೆ.
ಶೈಕ್ಷಣಿಕ ಅರ್ಹತೆ: ಯಾವುದೇ ವಿಷಯದಲ್ಲಿ ಮಾನ್ಯತೆ ಪಡೆದ ಸಂಸ್ಥೆಯಿಂದ ಸ್ನಾತಕೋತ್ತರ ಪದವಿ ಪಡೆದಿರಬೇಕು.
ಸ್ಪೆಷಲ್ ಆಫೀಸರ್ ಹುದ್ದೆಗಳಿಗೆ ಆಯಾ ಹುದ್ದೆಗೆ ಅಗತ್ಯವಿರುವ ವಿಶೇಷ ಶೈಕ್ಷಣಿಕ ಅರ್ಹತೆ ಇರಬೇಕು.
ಪದವಿ ಮತ್ತು ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳು ಮಾತ್ರ ಅರ್ಜಿಗಳನ್ನು ಸಲ್ಲಿಸಬಹುದು.
ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಬೇಕು. ಮುಖ್ಯ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.