-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
MANGALORE CCB ಕಾರ್ಯಾಚರಣೆ:  MDMA ಮಾರಾಟ ಮಾಡುತ್ತಿದ್ದ  ಮೂವರ ಸೆರೆ

MANGALORE CCB ಕಾರ್ಯಾಚರಣೆ: MDMA ಮಾರಾಟ ಮಾಡುತ್ತಿದ್ದ ಮೂವರ ಸೆರೆ


ಮಂಗಳೂರು:  ನಗರದಾದ್ಯಂತ ಮಾದಕ ವಸ್ತುವಾದ (Methylene dioxy methamphetamine) MDMA ನ್ನು  ಮಾರಾಟ ಮಾಡುತ್ತಿದ್ದ ಕುಖ್ಯಾತ ಡ್ರಗ್ ಪೆಡ್ಲರ್ ಸೇರಿದಂತೆ ಮೂರು ಮಂದಿಯನ್ನು ಮಂಗಳೂರು  CCB ಪೊಲೀಸರು ಬಂಧಿಸಿದ್ದಾರೆ.

ನಗರದ ಮೂಡುಶೆಡ್ಡೆ ಗ್ರಾಮದ ಶಿವನಗರದ  ಇಮ್ರಾನ್ ಯಾನೆ ಮೂಡುಶೆಡ್ಡೆ ಇಮ್ರಾನ್ (MOODUSHEDDE IMRAN) (36), ಉಡುಪಿ ಜಿಲ್ಲೆಯ ಮಣಿಪಾಲದ ಬಡಗಬೆಟ್ಟು‌ ನಿವಾಸಿ  ಅಮ್ಜತ್ ಖಾನ್ ( AMZAD KHAN)(42), ಮಂಗಳೂರಿನ ಮಂಜನಾಡಿಯ  ಅಬ್ದುಲ್ ಬಶೀರ್ ಅಬ್ಬಾಸ್ ( ABDUL BASHEER ABBAS) (39) ಬಂಧಿತರು.

ಮಂಗಳೂರು ಮೂಡುಶೆಡ್ಡೆಯ ನಿವಾಸಿ ಮೊಹಮ್ಮದ್ ಇಮ್ರಾನ್ ಎಂಬಾತನು ಇನ್ನಿಬ್ಬರೊಂದಿಗೆ ಸೇರಿಕೊಂಡು ಬೆಂಗಳೂರಿನಿಂದ MDMA ಮಾದಕ ವಸ್ತುವನ್ನು ಖರೀದಿಸಿಕೊಂಡು  ಕಾರಿನಲ್ಲಿ ಸಾಗಾಟ ಮಾಡಿಕೊಂಡು ಬೊಂದೆಲ್ ಪಡುಶೆಡ್ಡೆ ಪರಿಸರದಲ್ಲಿ ಜನರಿಗೆ ಮಾರಾಟ ಮಾಡುತ್ತಿದ್ದರು. ಈ  ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು CCB ಘಟಕದ ಎಸಿಪಿ ಪಿ ಎ ಹೆಗಡೆ ರವರ ನೇತೃತ್ವದ ಸಿಸಿಬಿ ಪೊಲೀಸರು ದಾಳಿ ನಡೆಸಿ  ಮೂವರನ್ನು ಬಂಧಿಸಿದ್ದಾರೆ.


ಮೂವರನ್ನು ಬಂಧಿಸಿದ ಪೊಲೀಸರು ಅವರ ವಶದಿಂದ ಒಟ್ಟು 170 ಗ್ರಾಂ ತೂಕದ ರೂ. 9 ಲಕ್ಷ  ಮೌಲ್ಯದ ಎಂಡಿಎಂಎ ಮಾದಕ ವಸ್ತು, ಎಂಡಿಎಂಎ ಫಿಲ್ಸ್-5,  ಕಾರು,  6 ಮೊಬೈಲ್ ಫೋನುಗಳು, ಡಿಜಿಟಲ್ ತೂಕ ಮಾಪನವನ್ನು ವಶಪಡಿಸಿಕೊಂಡಿದ್ದಾರೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ ರೂ 14,76,500/-ಆಗಬಹುದು ಎಂದು ಅಂದಾಜಿಸಲಾಗಿದೆ. ಆರೋಪಿಗಳ ವಿರುದ್ಧ ಕಾವೂರು (KAVOOR)  ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.  ಈ ಪ್ರಕರಣದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಅವರ ಪತ್ತೆ ಕಾರ್ಯ ಮುಂದುವರಿದಿದೆ. 

ಆರೋಪಿಗಳ ಪೈಕಿ ಇಮ್ರಾನ್ ಯಾನೆ ಮೂಡುಶೆಡ್ಡೆ ಇಮ್ರಾನ್ ಎಂಬಾತನ ವಿರುದ್ಧ ಈ ಹಿಂದೆ 2016 ನೇ ಇಸವಿಯಲ್ಲಿ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ವಾಮಂಜೂರು ಚರಣ್ ಎಂಬಾತನ ಕೊಲೆ ಪ್ರಕರಣ, ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಗಾಂಜಾ ಸಾಗಾಟ ಮತ್ತು ಮಾರಾಟ ಪ್ರಕರಣ, 2017 ನೇ ಇಸವಿಯಲ್ಲಿ ಕಾವೂರು ಪೊಲೀಸ್ ಠಾಣೆಯಲ್ಲಿ ದರೋಡೆ ಪ್ರಕರಣ, 2019 ನೇ ಇಸವಿಯಲ್ಲಿ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಗಾಂಜಾ ಸಾಗಾಟ ಮತ್ತು ಮಾರಾಟ ಪ್ರಕರಣ, 2020 ನೇ ಇಸವಿಯಲ್ಲಿ ಬಜಪೆ ಪೊಲೀಸ್ ಠಾಣೆಯಲ್ಲಿ ಮನೆಗೆ ಅಕ್ರಮ ಪ್ರವೇಶ ಮಾಡಿ ಹಾನಿಗೊಳಿಸಿದ  ಪ್ರಕರಣ, 2022 ನೇ ಇಸವಿಯಲ್ಲಿ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಮಾದಕ ವಸ್ತು ಸೇವನೆಯ 1 ಪ್ರಕರಣ, ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ MDMA ಸಾಗಾಟ ಮತ್ತು ಮಾರಾಟ ಪ್ರಕರಣ, ಉಡುಪಿ ಜಿಲ್ಲೆಯ ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ  MDMA ಸಾಗಾಟ ಮತ್ತು ಮಾರಾಟ ಪ್ರಕರಣ, 2023 ನೇ ಇಸವಿಯಲ್ಲಿ ಕಾವೂರು ಪೊಲೀಸ್ ಠಾಣೆಯಲ್ಲಿ MDMA ಸಾಗಾಟ ಮತ್ತು ಮಾರಾಟ ಪ್ರಕರಣ ಸೇರಿದಂತೆ ಒಟ್ಟು 9 ಪ್ರಕರಣಗಳು  ದಾಖಲಾಗಿರುತ್ತದೆ. ಈತನು ಇತ್ತೀಚೆಗೆ ಒಂದು ವಾರದ ಹಿಂದೆ ಜೈಲ್ ನಿಂದ ಜಾಮೀನು ಪಡೆದು ಬಿಡುಗಡೆಗೊಂಡಿದ್ದನು. 

ಇನ್ನೋರ್ವ ಆರೋಪಿ ಅಬ್ದುಲ್ ಬಶೀರ್ ಅಬ್ಬಾಸ್ ಎಂಬಾತನ ವಿರುದ್ಧ ಈ ಹಿಂದೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಹಲ್ಲೆ ಪ್ರಕರಣವೊಂದು ದಾಖಲಾಗಿರುತ್ತದೆ. 

ಈ ಮಾದಕ ವಸ್ತು ಮಾರಾಟ ಜಾಲದ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಎಸಿಪಿ ಪಿ ಎ ಹೆಗಡೆ, ಪೊಲೀಸ್ ನಿರೀಕ್ಷಕರಾದ ಶ್ಯಾಮ್ ಸುಂದರ್ ಹೆಚ್ ಎಂ, ಪಿಎಸ್ಐ ಯವರಾದ ನರೇಂದ್ರ, ಸುದೀಪ್ ಎಂ ವಿ, ಶರಣಪ್ಪ ಭಂಡಾರಿ ಹಾಗೂ ಸಿಸಿಬಿ ಸಿಬ್ಬಂದಿಯವರು  ಪಾಲ್ಗೊಂಡಿದ್ದರು.

Ads on article

🎁 Amazon Prime ಸದಸ್ಯರಾಗಿರಿ

Amazon Prime Offer
👉 ಉಚಿತ shipping, Prime Video, shopping deals—all in one!

Disclosure: ಈ ಲಿಂಕ್ Amazon Affiliate Program ನ ಭಾಗವಾಗಿದೆ. ನೀವು ಈ ಲಿಂಕ್ ಮೂಲಕ Prime ಸದಸ್ಯರಾಗಿದರೆ, ನಮಗೆ commission ಸಿಗಬಹುದು.

Advertise in articles 1

advertising articles 2

Advertise under the article