-->
1000938341
ಮಂಗಳೂರು: ಅಪ್ರಾಪ್ತ ಬಾಲಕಿಯ ಅಪಹರಿಸಿದ ಆರೋಪಿ ಬಂಧನ

ಮಂಗಳೂರು: ಅಪ್ರಾಪ್ತ ಬಾಲಕಿಯ ಅಪಹರಿಸಿದ ಆರೋಪಿ ಬಂಧನ

ಮಂಗಳೂರು: ಅಪ್ರಾಪ್ತ ಬಾಲಕಿಯನ್ನು ಅಪಹರಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪಣಂಬೂರು ಪೊಲೀಸರು ಬಾಲಕಿಯನ್ನು ರಕ್ಷಿಸಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಮಂಗಳೂರಿನ ಕಸಬಾ ಬೆಂಗ್ರೆ ನಿವಾಸಿ ಮೊಹಮ್ಮದ್ ಸರ್ಫಾಝ್ (22) ಬಂಧಿತ ಆರೋಪಿ
 
ಆರೋಪಿ ಮೊಹಮ್ಮದ್ ಸರ್ಫಾಝ್ ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಕರೆದುಕೊಂಡು ಹೋಗಿದ್ದನು. ಆದ್ದರಿಂದ ಆಕೆಯ ಮನೆಯವರು ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಆಗಸ್ಟ್ 10 ರಂದು ಪಣಂಬೂರು ಠಾಣೆಯಲ್ಲಿ ದೂರು ದಾಖಲಾಗಿತ್ತು.   ಪ್ರಕರಣ ದಾಖಲಾದ ಕೆಲವೇ ಗಂಟೆಗಳಲ್ಲಿ ಪೊಲೀಸ್ ತಂಡ ಪತ್ತೆ ಮಾಡಿ ಪ್ರಕರಣದಲ್ಲಿ ಅಪಹರಣಕ್ಕೊಳಗಾದ ಬಾಲಕಿಯನ್ನು ಪತ್ತೆ ಹಚ್ಚಿದ್ದಾರೆ. ಆರೋಪಿಯ ಮೇಲೆ ಪೊಕ್ಸೊ ಕಾಯ್ದೆಯಂತೆ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಆರೋಪಿಯ ಮೇಲೆ ಪಣಂಬೂರು ಪೊಲಿಸ್ ಠಾಣೆಯಲ್ಲಿ ಎರಡು ಪ್ರಕರಣ, ಕಂಕನಾಡಿ ಪೊಲೀಸ್ ಠಾಣೆಯಲ್ಲಿ ಎರಡು ಪ್ರಕರಣ, ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಎರಡು ಪ್ರಕರಣ ದಾಖಲಾಗಿದೆ. ಅಲ್ಲದೆ ಉಡುಪಿ ಜಿಲ್ಲೆಯ ಬೈಂದೂರು ಠಾಣೆಯಲ್ಲಿ ಮತ್ತು ಕಂಕನಾಡಿ ನಗರ ಠಾಣೆಯಲ್ಲಿ ದಾಖಲಾದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯಾಗಿರುತ್ತಾನೆ. 

ಅಪ್ರಾಪ್ತ ಬಾಲಕಿ ಅಪಹರಣ ಪ್ರಕರಣದಲ್ಲಿ ಅಪಹರಣಕ್ಕೊಳಗಾದ ಬಾಲಕಿ ಮತ್ತು ಆರೋಪಿ ಪತ್ತೆ ಕಾರ್ಯದಲ್ಲಿ  ಮಂಗಳೂರು ಉತ್ತರ ವಿಭಾಗದ ಮಾನ್ಯ ಸಹಾಯಕ ಪೊಲೀಸ್ ಆಯುಕ್ತರಾದ  ಮನೋಜ್ ಕುಮಾರ್ ನಾಯ್ಕ ಇವರ ನೇತೃತ್ವದಲ್ಲಿ ಪಣಂಬೂರು ಠಾಣಾ ಪೊಲೀಸ್‌ ನಿರೀಕ್ಷಕರಾದ  ಸೋಮಶೇಖರ್ ಜೆ. ಸಿ., ಪೊಲೀಸ್ ಉಪ ನಿರೀಕ್ಷಕರಾದ  ರಾಘವೇಂದ್ರ ಎಮ್ ನಾಯ್ಕ ಮತ್ತು  ಜ್ಞಾನಶೇಖರ್ ಹಾಗೂ ಪಣಂಬೂರು ಪೊಲೀಸ್ ಠಾಣಾ ಎ.ಎಸ್.ಐ ಕೃಷ್ಣ ಹಾಗೂ ಸಿಬ್ಬಂದಿಗಳಾದ ಪ್ರಮೋದ್ ಕುಮಾರ್ , ಪ್ರೇಮಾನಂದ್, ಮಾಣಿಕ್, ಕು.ಸೀಮಾ ಹಾಗೂ ಇತರ ಸಿಬ್ಬಂದಿಗಳು  ಭಾಗವಹಿಸಿದ್ದರು.

Ads on article

Advertise in articles 1

advertising articles 2

Advertise under the article