ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ನಿವೃತ್ತ ಪಿಎಸ್ಐ ಅರೆಸ್ಟ್


ಬೆಂಗಳೂರು: ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದ ಮೇಲೆ ಶಿವಾಜಿನಗರ ಪೊಲೀಸರು ನಿವೃತ್ತ ಪಿಎಸ್​ಐನನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ.

ನಿವೃತ್ತ ಪಿಎಸ್​ಐ ಅಬ್ದುಲ್​ ಹಫೀಜ್​(74) ಬಂಧಿತ ಆರೋಪಿ. ಸಂತ್ರಸ್ತೆಯ ಪೋಷಕರು ನೀಡಿದ ದೂರಿನನ್ವಯ ಆರೋಪಿ ವಿರುದ್ಧ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ಪ್ರಕರಣ ದಾಖಲಾಗುತ್ತಿದ್ದಂತೆ ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿ ಹಾಗೂ ಸಂತ್ರಸ್ತೆಯನ್ನು ಪ್ರತ್ಯೇಕವಾಗಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ. ಕೃತ್ಯದ ಕುರಿತು ಸಂತ್ರಸ್ತೆಯ ಹೇಳಿಕೆ ಪಡೆಯಲಾಗಿದ್ದು, ವೈದ್ಯಕೀಯ ಪರೀಕ್ಷೆಯ ವರದಿ ಆಧರಿಸಿ ಮುಂದಿನ ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

BREAKING NEWS
Loading latest news...
Join our WhatsApp Channel Powered By : Online Pudu