ಪಿಎಸ್‌ಐ ಹಗರಣ: ಮರು ಪರೀಕ್ಷೆಗೆ ಹೈಕೋರ್ಟ್ ಒಲವು- ಅಭ್ಯರ್ಥಿಗಳಿಗೆ ನಿರಾಸೆ

ಪಿಎಸ್‌ಐ ಹಗರಣ: ಮರು ಪರೀಕ್ಷೆಗೆ ಹೈಕೋರ್ಟ್ ಒಲವು- ಅಭ್ಯರ್ಥಿಗಳಿಗೆ ನಿರಾಸೆ





ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ನೇಮಕಾತಿ ನಿರೀಕ್ಷೆಯಲ್ಲಿದ್ದ ಅಭ್ಯರ್ಥಿಗಳಿಗೆ ಮತ್ತೊಮ್ಮೆ ನಿರಾಸೆಯಾಗಿದೆ. ನೇಮಕಾತಿ ಅಕ್ರಮದ ಹಿನ್ನೆಲೆಯಲ್ಲಿ ಮತ್ತೊಮ್ಮೆ ಪರೀಕ್ಷೆ ನಡೆಸುವ ಬಗ್ಗೆ ಕರ್ನಾಟಕ ಹೈಕೋರ್ಟ್ ಪೂರಕ ಅಭಿಪ್ರಾಯ ವ್ಯಕ್ತಪಡಿಸಿದೆ.



ಮರುಪರೀಕ್ಷೆಗೆ ಸರ್ಕಾರ ಹೊರಡಿಸಿರುವ ಆದೇಶವನ್ನು ರದ್ದುಪಡಿಸಬೇಕು. ಕಳಂಕಿತ ಮತ್ತು ಕಳಂಕ ರಹಿತ ಅಭ್ಯರ್ಥಿಗಳನ್ನು ಪ್ರತ್ಯೇಕ ಮಾಡಿ, ನೇಮಕಾತಿ ಆದೇಶವನ್ನು ನೀಡಲು ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿ ಸಲ್ಲಿಸಲಾಗಿದ್ದ 100ಕ್ಕೂ ಹೆಚ್ಚು ಅಭ್ಯರ್ಥಿಗಳು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಪಿ.ಎಸ್. ದಿನೇಶ್ ಕುಮಾರ್ ನೇತೃತ್ವದ ವಿಭಾಗೀಯ ಪೀಠ ಈ ಅಭಿಪ್ರಾಯ ವ್ಯಕ್ತಪಡಿಸಿದೆ.



ವಿಚಾರಣೆಯ ಸಂದರ್ಭದಲ್ಲಿ, ಮರು ಪರೀಕ್ಷೆ ನಡೆಸಲು ಸರ್ಕಾರ ಮಾಡಿದ ನಿರ್ಧಾರವನ್ನು ಅರ್ಜಿದಾರರ ವಕೀಲರು ಆಕ್ಷೇಪಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ಸರ್ಕಾರ ಮರು ಪರೀಕ್ಷೆ ನಡೆಸಿದರೆ ಸಮಸ್ಯೆ ಏನು..? ನೀವು ಪರೀಕ್ಷೆ ಬರೆದು ಪಾಸಾಗಿ. ಹಾಗೆಯೇ ಇತರರೂ ಪರೀಕ್ಷೆ ಬರೆಯಲಿ. ಸರ್ಕಾರ ಮರು ಪರೀಕ್ಷೆ ನಡೆಸಬಹುದು ಎಂಬುದು ನಮ್ಮ ಅಭಿಪ್ರಾಯ ಎಂದು ಮೌಖಿಕವಾಗಿ ಹೇಳಿದರು.



ಅಡ್ವಕೇಟ್ ಜನರಲ್ ಕೆ. ಶಶಿಕಿರಣ್ ಶೆಟ್ಟಿ ಹಾಜರಿದ್ದರೂ ಅರ್ಜಿದಾರರ ಪರ ಹಿರಿಯ ವಕೀಲರು ಹಾಜರಿಲ್ಲದೇ ಇದ್ದ ಕಾರಣ ವಾದ ಮಂಡಿಸಲಿಲ್ಲ.