ಅಕ್ರಮ ಆಸ್ತಿ ಗಳಿಕೆ: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಪರ ಸುಪ್ರೀಂ ಕೋರ್ಟ್‌ ತೀರ್ಪು

ಅಕ್ರಮ ಆಸ್ತಿ ಗಳಿಕೆ: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಪರ ಸುಪ್ರೀಂ ಕೋರ್ಟ್‌ ತೀರ್ಪು





ಅಕ್ರಮ ಆಸ್ತಿ ಗಳಿಕೆಗೆ ಸಂಬಂಧಿಸಿದಂತೆ ಭ್ರಷ್ಟಾಚಾರ ಆರೋಪ ಪ್ರಕರಣಗಳಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಸುಪ್ರೀಂ ಕೋರ್ಟ್ ರಿಲೀಫ್ ನೀಡಿದೆ.



ಡಿಕೆ ಶಿವಕುಮಾರ್ ವಿರುದ್ಧದ ಸಿಬಿಐ ತನಿಖೆಗೆ ಮಧ್ಯಂತರ ತಡೆ ನೀಡಿರುವ ಕರ್ನಾಟಕ ಹೈಕೋರ್ಟ್ ಆದೇಶದಲ್ಲಿ ಮಧ್ಯಪ್ರವೇಶ ಮಾಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.

ನ್ಯಾ. ಬಿ.ಆರ್. ಗವಾಯಿ, ಸಿ.ಟಿ. ರವಿ ಕುಮಾರ್ ಮತ್ತು ನ್ಯಾ. ಸಂಜಯ್ ಕುಮಾರ್ ಅವರಿದ್ದ ನ್ಯಾಯಪೀಠ ಈ ಆದೇಶ ಹೊರಡಿಸಿದೆ.



ಫೆ. 10, 2023ರಂದು ಕರ್ನಾಟಕ ಹೈಕೋರ್ಟ್ ಡಿ.ಕೆ. ಶಿವಕುಮಾರ್ ವಿರುದ್ಧದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಂತರ ತಡೆಯಾಜ್ಞೆ ನೀಡಿತ್ತು. ಇದನ್ನು ಪ್ರಶ್ನಿಸಿ ಸಿಬಿಐ ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಲು ನಿರಾಕರಿಸಿತು.



ಇದೇ ವೇಳೆ, ಅಕ್ರಮ ಆಸ್ತಿ ಗಳಿಕೆಗೆ ಸಂಬಂಧಿಸಿದಂತೆ ಭ್ರಷ್ಟಾಚಾರ ಆರೋಪ ಪ್ರಕರಣಗಳನ್ನು ರದ್ದು ಮಾಡಬೇಕು ಎಂದು ಕೋರಿ ಕರ್ನಾಟಕ ಹೈಕೋರ್ಟ್‌ ಮುಂದೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅರ್ಜಿ ಸಲ್ಲಿಸಿದ್ದು, ಡಿ.ಕೆ.ಶಿ. ಮತ್ತು ಸಿಬಿಐ ಪರ ವಕೀಲರ ವಾದ ಆಲಿಸಿದ ಹೈಕೋರ್ಟ್ ತೀರ್ಪನ್ನು ಕಾಯ್ದಿರಿಸಿದೆ.