-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಬೆಂಗಳೂರು: ಚಂದ್ರನ ಮೇಲೆ ವಿಕ್ರಮ್ ಲ್ಯಾಂಡರ್ ಇಳಿದ ಸ್ಥಳ ಶಿವಶಕ್ತಿ ಪಾಯಿಂಟ್ - ಪ್ರಧಾನಿ ಮೋದಿ ಘೋಷಣೆ

ಬೆಂಗಳೂರು: ಚಂದ್ರನ ಮೇಲೆ ವಿಕ್ರಮ್ ಲ್ಯಾಂಡರ್ ಇಳಿದ ಸ್ಥಳ ಶಿವಶಕ್ತಿ ಪಾಯಿಂಟ್ - ಪ್ರಧಾನಿ ಮೋದಿ ಘೋಷಣೆ


ಬೆಂಗಳೂರು: ಚಂದ್ರಯಾನ-3 ಮಿಷನ್ ಯಶಸ್ವಿಯಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಪೀಣ್ಯದಲ್ಲಿರುವ ಇಸ್ರೋ ಕಮಾಂಡರ್ ಸೆಂಟರ್ ನಲ್ಲಿ ವಿಜ್ಞಾನಿಗಳನ್ನು ಭೇಟಿಯಾಗಿ ಸಂವಾದ ನಡೆಸಿದರು. ಈ ವೇಳೆ ವಿಕ್ರಮ್​ ಲ್ಯಾಂಡರ್ ಇಳಿದ ಸ್ಥಳವನ್ನು ‘ಶಿವಶಕ್ತಿ ಪಾಯಿಂಟ್’ ಎಂದು ಕರೆಯೋಣ ಎಂದು ಘೋಷಿಸಿದರು.

ಶಿವನಲ್ಲಿ ಮಾನವ ಶಕ್ತಿಯನ್ನು ರೂಪಿಸುವ ಶಕ್ತಿ ಇದೆ. ಚಂದ್ರನ ಮೇಲೂ ತಿರಂಗ ರಾರಾಜಿಸುತ್ತಿದೆ. ಚಂದ್ರಯಾನ-2 ಪತನ ಸ್ಥಳಕ್ಕೆ ತಿರಂಗ ಪಾಯಿಂಟ್​ ಎಂದು ನಾಮಕರಣ ಮಾಡಿದರು. ಈ ತಿರಂಗ ಪಾಯಿಂಟ್​​​ ಮುಂದಿನ ಸಾಧನೆಗಳಿಗೆ ಪ್ರೇರಣೆಯಾಯಿತು. ಚಂದ್ರಯಾನ-3 ಯಶಸ್ಸಿನಲ್ಲಿ ಇಸ್ರೋ ಸಾಧನೆ ದೊಡ್ಡದು. ಮೇಕ್​ ಇನ್​ ಇಂಡಿಯಾ ಈಗ ಚಂದ್ರನವರೆಗೂ ತಲುಪಿದೆ ಎಂದು ಖುಷಿಯಿಂದ ಮುಕ್ತಕಂಠದಿಂದ ಇಸ್ರೊ ವಿಜ್ಞಾನಿಗಳನ್ನು ಶ್ಲಾಘಿಸಿ ಬೆಂಗಳೂರಿನ ಇಸ್ರೊ ಕಚೇರಿಯಲ್ಲಿಂದು ಘೋಷಿಸಿದರು.

ಚಂದ್ರಯಾನ - 3 ಯಶಸ್ವಿಯಾದ ದಿನ ಇಡೀ ಮನುಕುಲಕ್ಕೆ ಮಹತ್ವಪೂರ್ಣವಾದದ್ದು. ಆದ್ದರಿಂದ ಆಗಸ್ಟ್ 23ರಂದು ಚಂದ್ರಯಾನ ಯಶಸ್ವಿಯಾದ ದಿನವನ್ನು ರಾಷ್ಟ್ರೀಯ ಬಾಹ್ಯಾಕಾಶ ದಿನ ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ.

ಚಂದ್ರನ ಮೇಲೆ ಪ್ರಜ್ಞಾನ್​ ಪರಾಕ್ರಮ ಕಂಡು ಖುಷಿಯಾಗಿದೆ. ಇಡೀ ವಿಶ್ವವೇ ಭಾರತದ ವಿಜ್ಞಾನ, ತಂತ್ರಜ್ಞಾನವನ್ನು ಒಪ್ಪಿಕೊಂಡಿದೆ ಎಂದು ಇಸ್ರೋ ಕಮಾಂಡ್​ ಸೆಂಟರ್​ನಲ್ಲಿ ಪ್ರಧಾನಿ ಮೋದಿ ಹೇಳಿದರು. ಆಗಸ್ಟ್ 23 ರ ಆ ದಿನ ನನ್ನ ಕಣ್ಣ ಮುಂದೆ ಪ್ರತಿ ಸೆಕೆಂಡ್ ಮತ್ತೆ ಮತ್ತೆ ತಿರುಗುತ್ತಿದೆ, ನಿಮ್ಮ ಸಾಧನೆಯನ್ನು ಎಷ್ಟೇ ಕೊಂಡಾಡಿದರೂ ಅದು ಕಡಿಮೆಯೇ. ಚಂದ್ರನ ಮೇಲೆ ಪ್ರಜ್ಞಾನ್​ ಪರಾಕ್ರಮ ಕಂಡು ಖುಷಿಯಾಗಿದೆ. ಇಡೀ ವಿಶ್ವವೇ ಭಾರತದ ವಿಜ್ಞಾನ, ತಂತ್ರಜ್ಞಾನವನ್ನು ಒಪ್ಪಿಕೊಂಡಿದೆ ಎಂದು ಇಸ್ರೋ ಕಮಾಂಡ್​ ಸೆಂಟರ್​ನಲ್ಲಿ ಪ್ರಧಾನಿ ಮೋದಿ ಹೇಳಿದರು.

ವಿಶ್ವದ ದೊಡ್ಡ ದೊಡ್ಡ ಸಮಸ್ಯೆಗಳಿಗೆ ಭಾರತ ಪರಿಹಾರ ಕಂಡಿದೆ. ನಿಮ್ಮೆಲ್ಲರ ಈ ಸಾಧನೆ ಇತರರಿಗೆ ಸ್ಪೂರ್ತಿದಾಯಕವಾಗಿದೆ. ನೀವೆಲ್ಲರೂ ಸೇರಿ ಭಾರತದ ಕನಸನ್ನು ನನಸು ಮಾಡಿದ್ದೀರಿ. ನಾನು ವಿದೇಶದಲ್ಲಿದ್ದೆ, ಆದರೆ ನನ್ನ ಹೃದಯವು ಎಲ್ಲಾ ಸಮಯದಲ್ಲೂ ಸಂಪೂರ್ಣವಾಗಿ ನಿಮ್ಮೊಂದಿಗೆ ಇತ್ತು ಎಂದು ವಿಜ್ಞಾನಿಗಳನ್ನು ಉದ್ದೇಶಿಸಿ ಮೋದಿ ಹೇಳಿದರು.

Ads on article

Advertise in articles 1

advertising articles 2

Advertise under the article

ಸುರ