ಬೆಳ್ತಂಗಡಿ: ದ.ಕ.ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಪುದುವೆಟ್ಟಿನಲ್ಲಿ ಪ್ರಖ್ಯಾತ ಕಬಡ್ಡಿ ಆಟಗಾರರೊಬ್ಬರು ಆತ್ಮಹತ್ಯೆಗೆ ಶರಣಾದ್ದಾರೆ.
ಪುದುವೆಟ್ಟು ನಿವಾಸಿ ಸ್ವರಾಜ್(24) ಆತ್ಮಹತ್ಯೆ ಮಾಡಿಕೊಂಡ ಕಬ್ಬಡ್ಡಿ ಆಟಗಾರ.
 ಉಜಿರೆಯ ಸಾನಿಧ್ಯ ಎಂಬ ಖಾಸಗಿ ಕಂಪೆನಿಯ ಉದ್ಯೋಗಿಯಾಗಿದ್ದ ಸ್ವರಾಜ್ ತಮ್ಮ ಮನೆಯ ಸ್ನಾನದ ಕೊಠಡಿಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣವೇನೆಂದು ಇನ್ನೂ ತಿಳಿದು ಬಂದಿಲ್ಲ. ಸ್ವರಾಜ್ ಕಬ್ಬಡ್ಡಿಯಲ್ಲಿ ಜಿಲ್ಲಾಮಟ್ಟವನ್ನು ಪ್ರತಿನಿಧಿದಿ ಪ್ರಸಿದ್ಧಿ ಪಡೆದಿದ್ದರು.
ಈ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.