ಪತಿಯ ಅನೈತಿಕ ಸಂಬಂಧದಿಂದ ಬೇಸತ್ತು ಪ್ರಾಣಬಿಟ್ಟ ಪತ್ನಿ

ಮೈಸೂರು: ಪತಿಯ ಅನೈತಿಕ ಸಂಬಂಧಕ್ಕೆ ಬೇಸತ್ತು ಪತ್ನಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ಹನುಮನಹಾಳು ಗ್ರಾಮದಲ್ಲಿ ನಡೆದಿದೆ.

ಮನುರಾಣಿ(24) ಪತಿಯ ಅನೈತಿಕ ಸಂಬಂಧದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡವರೂ. ಪತಿ ಮಂಜು ವಿರುದ್ಧ ಮೃತ ಮಹಿಳೆಯ ಕುಟುಂಬಸ್ಥರು ಕೊಲೆ‌ ಆರೋಪ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಬನ್ನೂರು ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮನುರಾಣಿ ಹಾಗೂ ಮಂಜು ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಆದರೆ ಮಂಜು ತನ್ನದೇ ಗ್ರಾಮದ ವಿವಾಹಿತ ಮಹಿಳೆಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದನು. ಈ ವಿಚಾರವಾಗಿ ದಂಪತಿ ನಡುವೆ ಜಗಳವಾಗುತ್ತಿತ್ತು. ಒಮ್ಮೆ ಗ್ರಾಮಸ್ಥರ ಸಮ್ಮುಖದಲ್ಲಿ ರಾಜಿ ಪಂಚಾಯಿತಿಕೆಯೂ ನಡೆದಿತ್ತು.

ರಾಜಿ ಪಂಚಾಯಿತಿಕೆ ಬಳಿಕ ಸುಮ್ಮನಾಗದ ಮಂಜು ಆಕೆಯೊಂದಿಗೆ ತನ್ನ ಅನೈತಿಕ ಸಂಬಂಧವನ್ನೂ ಮುಂದುವರೆಸಿದ್ದ. ಇದನ್ನೂ ಪ್ರಶ್ನಿಸಿದ್ದಕ್ಕೆ ಮನುರಾಣಿಗೆ ವರದಕ್ಷಿಣೆ ತರುವಂತೆ ಕಿರುಕುಳ ನೀಡುತ್ತಿದ್ದ ಎಂದು ತಿಳಿದು ಬಂದಿದೆ. ಇದರಿಂದ ಬೇಸತ್ತಿದ್ದ ಮನುರಾಣಿ ರವಿವಾರ ಸಂಜೆ ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮನುರಾಣಿ ಆತ್ಮಹತ್ಯೆ ಮಾಡಿಕೊಳ್ಳುವ ಮನಸ್ಥಿತಿಯನ್ನೂ ಹೊಂದಿಲ್ಲ. ಆಕೆಗೆ ಬಲವಂತವಾಗಿ ವಿಷಕುಡಿಸಿ ಹತ್ಯೆ ಮಾಡಲಾಗಿದೆ ಎಂದು ಮೃತ ಮಹಿಳೆಯ ಕುಟುಂಬಸ್ಥರೂ ಆರೋಪಿಸಿದ್ದಾರೆ. ಬನ್ನೂರು ಪೊಲೀಸ್​ ಠಾಣೆಯಲ್ಲಿ ಮಹಿಳೆಯ ಪತಿ ವಿರುದ್ಧ ಕೊಲೆ ಆರೋಪದಡಿ ದೂರು ದಾಖಲಿಸಲಾಗಿದೆ.

BREAKING NEWS
Loading latest news...
Join our WhatsApp Channel Powered By : Online Pudu