Sulya:- ಲಂಚ ಪಡೆಯುತ್ತಿದ್ದ ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ.

ಸುಳ್ಯ

ಲಂಚ ಸ್ವೀಕಾರ ಮಾಡುತ್ತಿದ್ದಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಸುಳ್ಯದ ಸಂಪಾಜೆ- ಅರಂತೋಡಿನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಗ್ರಾಮ ಲೆಕ್ಕಾಧಿಕಾರಿ ಮಿಯಾಸಾಹೇಬ್ ಮುಲ್ಲಾ ಎಂಬವರನ್ನು ಬಂಧಿಸಿದ್ದಾರೆ.

ಅರಂತೋಡಿನ ಹರಿಪ್ರಸಾದ್ ಎಂಬವರು ಹಕ್ಕು ಖುಲಾಸೆಗಾಗಿ ಅರ್ಜಿ ಸಲ್ಲಿಸಿದ್ದರು. ಈ ವೇಳೆ ಕಡತ ವಿಲೇವಾರಿಗಾಗಿ ಲೆಕ್ಕಾಧಿಕಾರಿ ಲಂಚ ಹಣದ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಗ್ರಾಮ ಲೆಕ್ಕಾಧಿಕಾರಿ ಮಿಯಾಸಾಬ್ ಮುಲ್ಲಾ ಇಂದು 5000 ರೂಪಾಯಿ ಹಣ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಪೋಲಿಸರ ಬಲೆಗೆ ಬಿದ್ದಿದ್ದಾರೆ.


ಲೋಕಾಯುಕ್ಕ ಎಸ್ಪಿ ಸೈಮನ್ ಅವರ ಮಾರ್ಗದರ್ಶನದಲ್ಲಿ, ಡಿವೈಎಸ್ಪಿ ಚೆಲುವರಾಜ್,ಶ್ರೀಮತಿ ಕಲಾವತಿ ಮತ್ತು ಪೊಲೀಸ್ ನಿರೀಕ್ಷಕ ಅಮಾನುಲ್ಲಾ ಮತ್ತು ಲೋಕಾಯುಕ್ತ ಪೊಲೀಸ್ ಸಿಬ್ಬಂದಿಗಳ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.