ಉಪ್ಪಿನಂಗಡಿ- ಮಗಳ ಮೇಲೆ ತಂದೆಯಿಂದಲೇ ಅತ್ಯಾಚಾರ: ತಂದೆಯ ಬಂಧನ
Friday, August 18, 2023
ಉಪ್ಪಿನಂಗಡಿ: ಸ್ವಂತ ತಂದೆಯೇ ಅಪ್ರಾಪ್ತ ವಯಸ್ಕ ಮಗಳ ಮೇಲೆ ಅತ್ಯಾಚಾರವೆಸಗಿ ಆಕೆಯನ್ನು ಗರ್ಭಿಣಿಯನ್ನಾಗಿಸಿದ ಘಟನೆ ಗೋಳಿತ್ತೊಟ್ಟು ಗ್ರಾ.ಪಂ. ವ್ಯಾಪ್ತಿಯಲ್ಲಿ ನಡೆದಿದ್ದು, ಪೋಸ್ಕೊ ಕಾಯ್ದೆಯಡಿ ಆರೋಪಿಯನ್ನು ಬಂಧಿಸಲಾಗಿದೆ.
ಗೋಳಿತೊಟ್ಟು ಗ್ರಾ.ಪಂ. ವ್ಯಾಪ್ತಿಯ ನಿವಾಸಿ ತನ್ನ ಮಗಳ ಮೇಲೆ ಕೆಲವು ತಿಂಗಳುಗಳ ಹಿಂದೆ ಅತ್ಯಾಚಾರ ವೆಸಗಿದ್ದು, ಮಗಳ ಆರೋಗ್ಯದ ಮೇಲೆ ವ್ಯತ್ಯಾಸಗಳಾದಾಗ ತಾಯಿಯು ಮಗಳನ್ನು ಆ. 16ರಂದು ಆಸ್ಪತ್ರೆಗೆ ಕರೆದು ಕೊಂಡು ಹೋದಾಗ ಮಗಳು ಗರ್ಭಿಣಿ ಯಾಗಿರುವುದು ಬೆಳಕಿಗೆ ಬಂದಿದೆ. ಬಳಿಕ ಸಂತ್ರಸ್ತ ನೀಡಿದ ದೂರಿನಂತೆ ಪೋಕ್ಸೋ ಕಾಯ್ದೆ ದಾಖಲಿಸಿಕೊಂಡ ಉಪ್ಪಿನಂಗಡಿ ಪೊಲೀಸರು ಆರೋಪಿ ತಂದೆಯನ್ನು ಬಂಧಿಸಿದ್ದಾರೆ.