-->
1000938341
ಎಂಡೋಸಲ್ಫಾನ್ ಬಾಧಿತ ಯುವತಿಗೆ ಲೈಂಗಿಕ ಕಿರುಕುಳ- 10 ವರ್ಷ ಕಠಿಣ ಸಜೆ

ಎಂಡೋಸಲ್ಫಾನ್ ಬಾಧಿತ ಯುವತಿಗೆ ಲೈಂಗಿಕ ಕಿರುಕುಳ- 10 ವರ್ಷ ಕಠಿಣ ಸಜೆ


ಮಂಗಳೂರು: ಎಂಡೋಸಲ್ಫಾನ್ ಬಾಧಿತ ಯುವತಿ ಮೇಲೆ ಲೈಂಗಿಕ ಕಿರುಕುಳ ನೀಡಿದ ಆರೋಪ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ಹಾಗೂ ವಿಶೇಷ ನ್ಯಾಯಾಲಯದಲ್ಲಿ ಸಾಬೀತಾಗಿದ್ದು, ಅಪರಾಧಿಗೆ ನ್ಯಾಯಾಲಯ 10 ವರ್ಷಗಳ ಕಠಿಣ ಸಜೆ ವಿಧಿಸಿ ತೀರ್ಪು ನೀಡಿದೆ.

ಬಂಟ್ವಾಳ ತಾಲೂಕಿನ ಪೆರುವಾಯಿ ಗ್ರಾಮದ ರಾಜೇಶ್ ರೈ (33) ಶಿಕ್ಷೆಗೊಳಗಾದ ಅಪರಾಧಿ

 2015ರ ಅ.1ರಂದು ಯುವತಿಯ ತಂದೆ, ತಾಯಿ ಮತ್ತು ಸಹೋದರಿಯರು ತೋಟದ ಕೆಲಸಕ್ಕೆಂದು ಹೋಗಿದ್ದರು. ಯುವತಿ ಒಬ್ಬಳೇ ಇರುವುದನ್ನು ತಿಳಿದುಕೊಂಡ ಆರೋಪಿ ಆಕೆಯನ್ನು ಜಗಲಿಯಿಂದ ಮನೆಯೊಳಗೆ ಎಳೆದುಕೊಂಡು ಹೋಗಿ ಮದುವೆಯಾಗು ವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯ ನಡೆಸಿದ್ದನು. ಈ ಬಗ್ಗೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

 ಪ್ರಕರಣದ ಸಮಗ್ರ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಪ್ರೀತಿ ಕೆ.ಪಿ. ಅವರು ಅಪರಾಧವು
ಸಾಬೀತಾದ ಹಿನ್ನೆಲೆಯಲ್ಲಿ ಸೆ.7 ರಂದು ಆರೋಪಿಯನ್ನು ದೋಷಿ ಎಂದು ತೀರ್ಮಾನಿಸಿ ಭಾರತೀಯ ದಂಡ ಸಂಹಿತೆ ಕಲಂ 376(2)(ಎಲ್) ಅಡಿಯಲ್ಲಿ ಹತ್ತು ವರ್ಷದ ಕಠಿಣ ಸಜೆ ಹಾಗೂ 10,000 ರೂ. ದಂಡ, ಕಲಂ 448ರಡಿ ಮೂರು ತಿಂಗಳ ಕಠಿಣ ಶಿಕ್ಷೆವಿಧಿಸಿ ತೀರ್ಪು ನೀಡಿದ್ದಾರೆ. ಅಲ್ಲದೆ ಸಂತ್ರಸ್ತೆಗೆ ಪರಿಹಾರ ನೀಡುವಂತೆ ಕಾನೂನು ಸೇವಾ ಪ್ರಾಧಿ ಕಾರಕ್ಕೆ ಆದೇಶ ನೀಡಿದ್ದಾರೆ.

ASPಯಾಗಿದ್ದ ರಾಹುಲ್ ಕುಮಾರ್ ತನಿಖೆ ನಡೆಸಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕಾಯಿದೆಯಡಿ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಆರೋಪಿ ವಿರುದ್ಧ ಒಟ್ಟು 27 ಸಾಕ್ಷಿದಾರರನ್ನು ದೋಷಾರೋಪ ಪಟ್ಟಿಯಲ್ಲಿ ಉಲ್ಲೇಖಿಸಿದ್ದು ಅದರಲ್ಲಿ 14 ಸಾಕ್ಷಿದಾರರ ವಿಚಾರಣೆ ನಡೆದಿತ್ತು. ಯುವತಿ 5ನೇ ತರಗತಿಯಲ್ಲಿ ಓದುತ್ತಿದ್ದು, ಆಕೆಯ ತಂದೆ- ತಾಯಿ ಅನಕ್ಷರಸ್ಥರು. 2021ರ ಸೆ.22ರಂದು ವಿಚಾರಣೆ ಆರಂಭಗೊಂಡಿದ್ದು, 2023ರ ಫೆ.27ರಂದು  ವಿಚಾರಣೆ ಮುಗಿದಿತ್ತು. ಅಭಿಯೋಜಕರ ಪರವಾಗಿ ಸರಕಾರಿ ಅಭಿಯೋಜಕ ಜ್ಯೋತಿ ಪ್ರಮೋದ ನಾಯಕ ಅವರು ವಿಚಾರಣೆ ನಡೆಸಿ ವಾದ ಮಂಡಿಸಿದ್ದರು.

Ads on article

Advertise in articles 1

advertising articles 2

Advertise under the article