-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಮಂಗಳೂರು: ಅಕ್ರಮ ಸಾಗಾಟದ ವೇಳೆ ವಶಕ್ಕೆ ಪಡೆದಿದ್ದ ರಕ್ತಚಂದನ 28 ಕೋಟಿಗೆ ಬಿಡ್- 3 ಪ್ರತಿಷ್ಠಿತ ಏಜೆನ್ಸಿಗಳಿಂದ ಖರೀದಿ

ಮಂಗಳೂರು: ಅಕ್ರಮ ಸಾಗಾಟದ ವೇಳೆ ವಶಕ್ಕೆ ಪಡೆದಿದ್ದ ರಕ್ತಚಂದನ 28 ಕೋಟಿಗೆ ಬಿಡ್- 3 ಪ್ರತಿಷ್ಠಿತ ಏಜೆನ್ಸಿಗಳಿಂದ ಖರೀದಿ


ಮಂಗಳೂರು: ವಿದೇಶಕ್ಕೆ ಅಕ್ರಮ ಸಾಗಾಟ ಮಾಡುತ್ತಿದ್ದ ವೇಳೆ ಪಣಂಬೂರು ಬಂದರು ಕಸ್ಟಮ್ಸ್‌ ಅಧಿಕಾರಿಗಳು ವಶಕ್ಕೆ ಪಡೆದಿದ್ದ ರಕ್ತಚಂದನವನ್ನು ಹರಾಜು ಹಾಕಲಾಗಿದೆ. ಇದನ್ನು 3 ಪ್ರತಿಷ್ಠಿತ ಏಜೆನ್ಸಿಗಳು ಆನ್‌ಲೈನ್‌ನಲ್ಲಿ ಬರೋಬ್ಬರಿ 28 ಕೋಟಿ ರೂ.ಗೆ ಬಿಡ್ ನಲ್ಲಿ ಖರೀದಿಸಿದೆ.

2008ರಿಂದ 2023ರವರೆಗೆ 4 ಪ್ರಕರಣಗಳಲ್ಲಿ ಕಸ್ಟಮ್ಸ್ ನವರು ವಶಪಡಿಸಿಕೊಂಡಿದ್ದ ಸುಮಾರು 56.2 ಮೆಟ್ರಿಕ್ ಟನ್ ರಕ್ತಚಂದನವನ್ನು ಹರಾಜು ಹಾಕಲಾಗಿತ್ತು‌. ಮಂಗಳೂರು ಬಂದರಿನಿಂದ ಅಕ್ರಮವಾಗಿ ವಿದೇಶಕ್ಕೆ ಕಳ್ಳಸಾಗಾಟ ಮಾಡುತ್ತಿದ್ದ  ರಕ್ತಚಂದನ ಇದಾಗಿತ್ತು. ಸುಪ್ರೀಂಕೋರ್ಟ್‌ ನಿರ್ದೇಶನದಂತೆ ರಾಜ್ಯ ಅರಣ್ಯ ಇಲಾಖೆಯು ಆನ್‌ಲೈನ್ ಮೂಲಕ ಹರಾಜು ಹಾಕಿದೆ‌.

ಒಟ್ಟು 2,094 ದಿಮ್ಮಿಗಳನ್ನೊಳಗೊಂಡ 56.2 ಮೆಟ್ರಿಕ್ ಟನ್ ರಕ್ತಚಂದನವನ್ನು ಏಜೆನ್ಸಿಗಳು ಹರಾಜಿನಲ್ಲಿ ಖರೀದಿಸಿತಗತು. ಎ ಕೆಟಗರಿ 3 ಲಾಟ್, ಬಿ ಕೆಟಗರಿ 6 ಲಾಟ್, ಸಿ ಕೆಟಗರಿ 6 ಲಾಟ್, ಡಿ ಕೆಟಗರಿ 3 ಲಾಟ್‌ ಗಳಾಗಿ ವಿಂಗಡಣೆ ಮಾಡಲಾಗಿತ್ತು. ಒಟ್ಟು 18 ಲಾಟ್‌ಗಳಲ್ಲಿ ನ್ಯಾಚುರಲ್ ಕನ್ನೊಜೆನ್ಸಿ ಏಜೆನ್ಸಿ 10 ಲಾಟ್‌ಗೆ 14.5 ಕೋಟಿ ರೂ. ಬಿಡ್ ಹಾಗೂ ಯಮಾ ರಿಬನ್ಸ್ ಏಜೆನ್ಸಿ ಲಾಟ್‌ಗೆ 4.2ಕೋಟಿ ರೂ. ಬಿಡ್ ಜೊತೆಗೆ ಅಕ್ಷಾ 3 ಲಾಟ್‌ ಗೆ 1.6 ಕೋಟಿ ರೂ.ಗೆ ಬಿಡ್ ಗೆ ಖರೀದಿ ಮಾಡಿದೆ. ಮೂರು ಬಿಡ್‌ಗಳ ಒಟ್ಟು ಮೊತ್ತ ತೆರಿಗೆ ಸೇರಿ 28 ಕೋಟಿ ರೂ. ಆಗಿದೆ. ಚೀನಾ, ದುಬೈ, ಜಪಾನ್ ಸೇರಿದಂತೆ ಇತರ ದೇಶಗಳಲ್ಲಿ ರಕ್ತಚಂದನಕ್ಕೆ ಬೇಡಿಕೆಯಿದ್ದು, ಖರೀದಿ ಮಾಡಿದ ಕಂಪೆನಿ ಅಲ್ಲಿಗೆ ಇದನ್ನು ಸಾಗಾಟ ಮಾಡಲಿದೆ. 

2012 ಆ.24ರಂದು ನವಮಂಗಳೂರು ಬಂದರು ಮೂಲಕ ದುಬೈಗೆ ಕಳ್ಳಸಾಗಾಟ ಮಾಡಲು ಕಂಟೈನರ್‌ನಲ್ಲಿ ತುಂಬಿಸಿಡಲಾಗಿದ್ದ 5,810 ಕೆ.ಜಿ. ತೂಕದ ರಕ್ತಚಂದನವನ್ನು ಮಂಗಳೂರು ಬಂದರಿನಲ್ಲಿ ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದರು. 2014 ಆ.21ರಂದು ವಿದೇಶಕ್ಕೆ ಕಳ್ಳಸಾಗಣೆ ಮಾಡುತ್ತಿದ್ದ 16.99 ಟನ್ ರಕ್ತಚಂದನವನ್ನು ಕಂದಾಯ ಗುಪ್ತಚರ ನಿರ್ದೇಶನಾಲಯದ ಅಧಿಕಾರಿಗಳು ವಶಪಡಿಸಿಕೊಂಡಿದ್ದರು. 2020ರ ಜ.10ರಂದು ಥಾಯ್ಲೆಂಡ್‌ಗೆ ಸಾಗಿಸಲು ಯತ್ನಿಸುತ್ತಿದ್ದ 2.20 ಕೋಟಿ ರೂ. ಮೌಲ್ಯದ ರಕ್ತಚಂದನ ವಶಕ್ಕೆ ಪಡೆಯಲಾಗಿತ್ತು. 2022ರ ಜೂ.3ರಂದು ಆಂಧ್ರಪ್ರದೇಶದ ತಿರುಪತಿಯಿಂದ ಮಂಗಳೂರು ಮೂಲಕ ಸಿಂಗಾಪುರಕ್ಕೆ ಸಾಗಿಸಲು ಯತ್ನಿಸುತ್ತಿದ್ದ 4.14 ಕೋಟಿ ರೂ. ಮೌಲ್ಯದ ರಕ್ತಚಂದನ ವಶಕ್ಕೆ ಪಡೆಯಲಾಗಿತ್ತು. ಈ ನಾಲ್ಕು ಪ್ರಕರಣಗಳಲ್ಲಿ ವಶಕ್ಕೆ ಪಡೆಯಲಾದ ರಕ್ತಚಂದನವನ್ನು ಹರಾಜಿಗಿಡಲಾಗಿತ್ತು.

Ads on article

Advertise in articles 1

advertising articles 2

Advertise under the article

ಸುರ