ಅಪಾರ್ಟ್‌ಮೆಂಟ್ 9ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ


ಬೆಂಗಳೂರು: ಅಪಾರ್ಟ್ ಮೆಂಟ್ ನ 9ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ದುರ್ಘಟನೆ ಬ್ಯಾಟರಾಯನಪುರದಲ್ಲಿ ನಡೆದಿದೆ.

ವಿಜಯಲಕ್ಷ್ಮಿ (17) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ.

 ವಿದ್ಯಾರ್ಥಿನಿ ವಿಜಯಲಕ್ಷ್ಮಿ ಖಾಸಗಿ ಕಾಲೇಜಿನಲ್ಲಿ ಕಾಮರ್ಸ್‌ ವ್ಯಾಸಂಗ ಮಾಡುತ್ತಿದ್ದಳು. ತಂದೆ-ತಾಯಿಗೆ ವಿಚ್ಛೇದನವಾದ ಬಳಿಕ, ತನ್ನ ತಾಯಿ ಯಶೋಧರೊಂದಿಗೆ ಜ್ಞಾನಭಾರತಿಯ ಜ್ಞಾನಜ್ಯೋತಿನಗರದಲ್ಲಿ ವಾಸವಿದ್ದಳು. ಆದರೆ ಕಳೆದೊಂದು ವಾರದಿಂದ ವಿಜಯಲಕ್ಷ್ಮಿ ಖಿನ್ನತೆಗೆ ಜಾರಿದ್ದರು ಎಂದು ತಿಳಿದು ಬಂದಿದೆ. 

ಸ್ಥಳಕ್ಕೆ ಬ್ಯಾಟರಾಯನಪುರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.