ಇಂಡಿಗೋ ವಿಮಾನದ ತುರ್ತು ಬಾಗಿಲು ತೆರೆಯಲೆತ್ನಿಸಿದ ಪ್ರಯಾಣಿಕ ಪೊಲೀಸ್ ವಶಕ್ಕೆ
Thursday, September 21, 2023
ಚೆನ್ನೈ: ಇಂಡಿಗೋ ವಿಮಾನದ ತುರ್ತು ಬಾಗಿಲು ತೆರೆಯಲೆತ್ನಿಸಿದ ಪ್ರಯಾಣಿಕನನ್ನು ಸಿಐಎಸ್ಎಫ್ ಅಧಿಕಾರಿಗಳು ಪೊಲೀಸರಿಗೊಪ್ಪಿಸಿದ್ದಾರೆ.
ಮಂಗಳವಾರ ರಾತ್ರಿ ದಿಲ್ಲಿಯಿಂದ ಚೆನ್ನೈಗೆ ಪ್ರಯಾಣಿಸುತ್ತಿದ್ದ ಇಂಡಿಗೋ ಏರ್ ಲೈನ್ಸ್ ವಿಮಾನದ ಪ್ರಯಾಣಿಕನೋರ್ವ ತುರ್ತು ನಿರ್ಗಮನ ದ್ವಾರವನ್ನು ತೆರೆಯಲು ಯತ್ನಿಸಿದ್ದಾನೆ. ಈ ವೇಳೆ ಆತನನ್ನು ವಶಕ್ಕೆ ತೆಗೆದುಕೊಂಡ ಸಿಐಎಸ್ಎಫ್ ಅಧಿಕಾರಿಗಳು ಬಳಿಕ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ.
ವಿಮಾನವು ಚೆನ್ನೆಗೆ ಬಂದಿಳಿದ ಬಳಿಕ ತುರ್ತು ನಿರ್ಗಮನ ದ್ವಾರವನ್ನು ತೆರೆಯಲು ಯತ್ನಿಸಿದ ಮಣಿಕಂಠನ್ ಎಂಬಾತನ್ನು ಸಿಐಎಸ್ಎಫ್ ಅಧಿಕಾರಿಗಳಿಗೆ ಹಸ್ತಾಂತರಿಸಲಾಗಿತ್ತು. ಮಣಿಕಂಠನ್ ವಿರುದ್ಧ ಇಂಡಿಗೋ ಅಧಿಕೃತ ದೂರನ್ನೂ ಪೊಲೀಸ್ ಠಾಣೆಗೆ ಸಲ್ಲಿಸಿದೆ. ಈ ಬಗ್ಗೆ ತನಿಖೆ ನಡೆಯುತ್ತಿದೆ.