ಮಸೀದಿ ಮೇಲೆ ಭಗವಾಧ್ವಜ ಹಾರಿಸಿ ಪರಾರಿಯಾಗಿದ್ದ ನಾಲ್ವರು ಕಿಡಿಗೇಡಿಗಳು ಅಂದರ್

ಬೀದರ್: ಇಲ್ಲಿನ ಬಸವಕಲ್ಯಾಣ ತಾಲೂಕಿನ ಧನ್ನೂರಾ ಗ್ರಾಮದಲ್ಲಿ ಸೆ.21ರಂದು ತಡರಾತ್ರಿ ಮಸೀದಿಯೊಂದರ ಮೇಲೆ ಭಗವಾಧ್ವಜ ಹಾರಾಟ ಮಾಡಿ ನಾಪತ್ತೆಯಾಗಿದ್ದ ನಾಲ್ವರು ಕಿಡಿಗೇಡಿಗಳನ್ನು ಬಸವಕಲ್ಯಾಣ ಗ್ರಾಮೀಣ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ಧನ್ನೂರಾ ಗ್ರಾಮದ ಅಭಿಷೇಕ್, ಕಲ್ಯಾಣ್, ಸುಶೀಲ್ ಹಾಗೂ ವೀರೇಶ್ ಬಿರಾದಾರ ಬಂಧಿತ ಆರೋಪಿಗಳು.

ಆರೋಪಿಗಳು ಬಸವಕಲ್ಯಾಣ ತಾಲೂಕಿನ ಧನ್ನೂರ (ಕೆ) ಗ್ರಾಮದ ಹೊರವಲಯದ ಜಾಮಿಯಾ ಮಸೀದಿ ಮೇಲೆ ಸೆ.21ರಂದು ತಡರಾತ್ರಿ ಭಗವಾಧ್ವಜ ಹಾರಾಟ ಮಾಡಿ ಗ್ರಾಮದ ಶಾಂತಿ ಕೆಡಿಸುವ ವಾತಾವರಣ ಸೃಷ್ಟಿಸಿದ್ದರು. ಮರುದಿನ ಬೆಳಗ್ಗೆ ಈ ವಿಚಾರ ತಿಳಿದು ಸ್ಥಳಕ್ಕೆ ಬಂದ ಬಸವಕಲ್ಯಾಣ ಗ್ರಾಮೀಣ ಪೊಲೀಸರು ಗ್ರಾಮಸ್ಥರ ಮನವೊಲಿಸಿ ಭಗವಾಧ್ವಜ ತೆಗೆಸುವಲ್ಲಿ ಯಶಸ್ವಿಯಾಗಿದ್ದರು.

ಈ ಸಂಬಂಧ ಬಸವಕಲ್ಯಾಣ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸದ್ಯ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
BREAKING NEWS
Loading latest news...
Join our WhatsApp Channel Powered By : Online Pudu