ಪುತ್ತೂರು: ಬಸ್ ನಲ್ಲಿ ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿದ್ದ ಯುವಕ ಅರೆಸ್ಟ್


ಪುತ್ತೂರು: ಪುತ್ತೂರಿನಿಂದ ಕಾಣಿಯೂರು ಕಡೆಗೆ ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಯುವಕನೋರ್ವನು ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿದ್ದ ಬಗ್ಗೆ ಮಹಿಳೆ ದ.ಕ.ಜಿಲ್ಲಾ ಪೊಲೀಸ್ ಟ್ವಿಟರ್ ಖಾತೆಗೆ ಟ್ವೀಟ್ ಮಾಡಿ ದೂರು ನೀಡಿದ್ದರು.

ಈ ದೂರಿಗೆ ತಕ್ಷಣ ಸ್ಪಂದಿಸಿರುವ ಪೊಲೀಸರು ಆರೋಪಿ ಕಾಸರಗೋಡಿನ ವಿಷ್ಣು ಮೋಹನ್ ಎಂಬಾತನನ್ನು ಬಂಧಿಸಿದ್ದಾರೆ.

ಮಹಿಳೆಯು ಪುತ್ತೂರಿಂದ ಸುಳ್ಯ ತಾಲೂಕಿನ ನಿಂತಿಕಲ್ಲು ಎಂಬಲ್ಲಿಗೆ ಸಂಜೆ ಕೆಎಸ್ಸಾರ್ಟಿಸಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದರು. ಈ ವೇಳೆ ಬಸ್ಸಿನಲ್ಲಿ ಯುವಕ ಅನುಚಿತವಾಗಿ ವರ್ತಿಸಿ ಕಿರುಕುಳ ನೀಡಿದ್ದ ಎನ್ನಲಾಗಿದೆ. ಯುವಕ ಆಕೆಗೆ ತನ್ನ ಮೊಬೈಲ್ ನಂಬರ್ ನೀಡಿ, ಕರೆ ಮಾಡುವಂತೆ ಕೈಸನ್ನೆಯಲ್ಲಿ ತಿಳಿಸಿದ್ದಾನೆ. ಆ ಬಳಿಕ ಆತ ಸವಣೂರು ಎಂಬಲ್ಲಿ ಬಸ್ಸಿನಿಂದ ಇಳಿದು ಹೋಗಿದ್ದ. ಈ ಬಗ್ಗೆ ಮಹಿಳೆಯು ಟ್ವಿಟ್ ಮೂಲಕ ಪೊಲೀಸರಿಗೆ ದೂರು ನೀಡಿದ್ದರು. ಬೆಳ್ಳಾರೆ ಪೊಲೀಸರು ಮಹಿಳೆಯನ್ನು ಸಂಪರ್ಕಿಸಿ ದೂರು ಪಡೆದುಕೊಂಡು ಪ್ರಕರಣ ದಾಖಲಿಸಿಕೊಂಡಿದ್ದರು.

ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ದ.ಕ.ಜಿಲ್ಲಾ ಪೊಲೀಸ್ ಟ್ವಿಟರ್ ಖಾತೆಯಿಂದ ಪ್ರತಿಕ್ರಿಯಿಸಿದ್ದಾರೆ.
BREAKING NEWS
Loading latest news...
Join our WhatsApp Channel Powered By : Online Pudu