ಬಂಟ್ವಾಳ : ಲಾರಿ ಡಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

ಬಂಟ್ವಾಳ : ಎದುರಿನಿಂದ ಬಂದ ಲಾರಿ ಮುಖಾಮುಖಿಯಾಗಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ದಾರುಣವಾಗಿ ಮೃತಪಟ್ಟ ಘಟನೆ ಬಂಟ್ವಾಳದ ಪಾಣೆಮಂಗಳೂರು ನೂತನ ಸೇತುವೆಯಲ್ಲಿ ನಡೆದಿದೆ.

ಸಜೀಪ ಬೇಂಕ್ಯ ನಿವಾಸಿ ರಾಜ್ ಕುಮಾರ್ ಮೃತಪಟ್ಟ ದುರ್ದೈವಿ.

 
ರಾಜ್ ಕುಮಾರ್  ವಾಮದಪದವಿನಲ್ಲಿ ಭೂಮಿ ಹೊಂದಿದ್ದು, ಅದರಲ್ಲಿ ಕೃಷಿ ಮಾಡಿಕೊಂಡಿದ್ದರು. ಆದ್ದರಿಂದ ಅವರು ವಾಮದಪದವಿನಿಂದ ಸಜೀಪ ತಮ್ಮ ಮನೆಗೆ ಬರುತ್ತಿದ್ದ ವೇಳೆ ಎದುರಿನಿಂದ ಬಂದ ಲಾರಿ ಮುಖಾಮುಖಿಯಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಸವಾರ ರಾಜ್ ಕುಮಾರ್ ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ, ದಾರಿ ಮಧ್ಯೆ ಮೃತಪಟ್ಟಿದ್ದಾರೆ.

ಘಟನಾ ಸ್ಥಳಕ್ಕೆ ಬಂಟ್ವಾಳ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.