-->
ಸ್ವಾಮೀಜಿ ಸಿಕ್ಕಿಹಾಕಿಕೊಂಡಲ್ಲಿ ಎಲ್ಲಾ ಸತ್ಯ ಹೊರಬರುತ್ತದೆ, ದೊಡ್ಡದೊಡ್ಡವರ ಹೆಸರು ಬಹಿರಂಗವಾಗುತ್ತದೆ - ಚೈತ್ರಾ ಕುಂದಾಪುರ

ಸ್ವಾಮೀಜಿ ಸಿಕ್ಕಿಹಾಕಿಕೊಂಡಲ್ಲಿ ಎಲ್ಲಾ ಸತ್ಯ ಹೊರಬರುತ್ತದೆ, ದೊಡ್ಡದೊಡ್ಡವರ ಹೆಸರು ಬಹಿರಂಗವಾಗುತ್ತದೆ - ಚೈತ್ರಾ ಕುಂದಾಪುರ

ಬೆಂಗಳೂರು: ಉದ್ಯಮಿ ಗೋವಿಂದ ಬಾಬು ಪೂಜಾರಿಯವರಿಗೆ ವಿಧಾನಸಭೆ ಚುನಾವಣೆಯಲ್ಲಿ ಬೈಂದೂರು ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಬಹುಕೋಟಿ ರೂಪಾಯಿ ವಂಚನೆ ಆರೋಪ ಎದುರಿಸುತ್ತಿರುವ ಹಿಂದೂಪರ ನಾಯಕಿ ಚೈತ್ರಾ ಕುಂದಾಪುರನ ಸಿಸಿಬಿ ವಿಚಾರಣೆ ಆರಂಭವಾಗಿದೆ.

ನಿನ್ನೆ ಬಂಧನಕ್ಕೊಳಗಾದ ಆಕೆಯನ್ನು ರಾತ್ರಿ ಬೆಂಗಳೂರಿನ ಮಹಿಳಾ ಸಾಂತ್ವನ ಕೇಂದ್ರದಲ್ಲಿ ಇರಿಸಲಾಗಿತ್ತು. ಸದ್ಯ 10 ದಿನಗಳ ಕಾಲ ಕಸ್ಟಡಿಗೆ ಪಡೆದಿರುವ ಸಿಸಿಬಿ ಪೊಲೀಸರು, ಸಿಸಿಬಿ ಕಚೇರಿಗೆ ಕರೆತಂದು ವಿಚಾರಣೆ ನಡೆಸಲಿದ್ದಾರೆ. ಸಿಸಿಬಿ ಎಸಿಪಿ ರೀನಾ ಸುವರ್ಣರಿಂದ ವಿಚಾರಣೆ ನಡೆಯಲಿದೆ. ಬಳಿಕ ಹಣ ಪಡೆದ ಸ್ಥಳಗಳ ಮಹಜರು ನಡೆಯಲಿದೆ. ಚೈತ್ರಾ ಕುಂದಾಪುರನೊಂದಿಗೆ ಬಂಧಿತ ಗಗನ್ ಕಡೂರು, ರಮೇಶ್, ಧನರಾಜ್, ಶ್ರೀಕಾಂತ್, ಪ್ರಜ್ವಲ್ ಅವರನ್ನು ವಿಚಾರಣೆ ನಡೆಸಲಾಗುತ್ತದೆ.

ಸಿಸಿಬಿ ಬಂಧನದಲ್ಲಿರುವ ಚೈತ್ರಾ ಕುಂದಾಪುರನನ್ನು ಪೊಲೀಸ್ ಜೀಪಿನಲ್ಲಿ ಇಂದು ಸಿಸಿಬಿ ಪೊಲೀಸರು ಕರೆತಂದಿದ್ದಾರೆ. ಆಕೆ ಜೀಪಿನಿಂದ ಇಳಿಯುತ್ತಲೇ ಮಾಧ್ಯಮ ಪ್ರತಿನಿಧಿಗಳನ್ನು ಕಂಡಾಗ, ಸ್ಫೋಟಕ ಹೇಳಿಕೆ ನೀಡಿದ್ದಾರೆ.

ಮೊದಲು ಈ ಪ್ರಕರಣದಲ್ಲಿ ಸ್ವಾಮೀಜಿ ಸಿಕ್ಕಿ ಹಾಕಿಕೊಳ್ಳಲಿ. ಆ ಬಳಿಕ ಎಲ್ಲಾ ಸತ್ಯ ಗೊತ್ತಾಗುತ್ತದೆ ಸರ್. ಆ ಬಳಿಕ ದೊಡ್ಡ ದೊಡ್ಡವರ ಹೆಸರುಗಳು ಹೊರ ಬರುತ್ತವೆ. ಇಂದಿರಾ ಕ್ಯಾಂಟೀನ್ ಬಿಲ್ ಪೆಡಿಂಗ್ ಇರುವ ಕಾರಣ ಈ ಷಡ್ಯಂತ್ರ ರಚನೆಯಾಗಿದೆ. ಆರೋಪಿ ನಾನೇ ಆಗಿರಬಹುದು. ಸ್ವಾಮೀಜಿ ಸಿಕ್ಕ ಬಳಿಕ ಎಲ್ಲವೂ ಗೊತ್ತಾಗಲಿದೆ ಎಂದು ಹೇಳುತ್ತಾ ಚೈತ್ರಾ ಪೊಲೀಸ್ ಕಚೇರಿ ಒಳಗೆ ಹೋಗಿದ್ದಾರೆ.

ಬಳ್ಳಾರಿ ಜಿಲ್ಲೆಯ ಹಡಗಲಿಯ ಹಾಲಶ್ರೀ ಸ್ವಾಮೀಜಿಗೆ ಪ್ರಧಾನಿ ಕಚೇರಿಯ ಸಂಪರ್ಕವಿದೆ ಎಂದು ಗೋವಿಂದ ಬಾಬು ಪೂಜಾರಿ ಅವರಿಂದ ಒಂದೂವರೆ ಕೋಟಿ ಹಣ ಹಾಕಿಸಲಾಗಿದೆ. ಗೋವಿಂದ ಪೂಜಾರಿ ಜೊತೆಯಲ್ಲಿ ಚೈತ್ರಾ ಸಹ ಹಡಗಲಿಗೆ ತೆರಳಿ ಸ್ವಾಮೀಜಿಯನ್ನು ಭೇಟಿಯಾಗಿರುವ ಮಾಹಿತಿಯಿದೆ.

Ads on article

Advertise in articles 1

advertising articles 2

ಉಚಿತವಾಗಿ ಸುದ್ದಿ ಕೊಡುತ್ತಿರುವ ನಮಗೆ ಸಹಾಯ ಮಾಡಿ

  

Pay Rs 100

  

Advertise under the article