ಉಳ್ಳಾಲ: ಮೀನುಗಾರರ ಬಲೆಗೆ ಬಿದ್ದ ದೈತ್ಯ ಗಾತ್ರದ ಪಿಲಿ ತೊರಕೆ ಮೀನು


ಮಂಗಳೂರು: ಇಲ್ಲಿನ ಸೋಮೇಶ್ವರ ಉಚ್ಚಿಲ ಸಮುದ್ರ ತಟದ ಸಮೀಪ ಮೀನುಗಾರರು ಬೀಸಿದ ಬಲೆಗೆ ನಿನ್ನೆ ಸಂಜೆ ವೇಳೆ 75 ಕೆಜಿ ತೂಕದ ದೈತ್ಯಗಾತ್ರದ ಪಿಲಿ ತೊರಕೆ ಮೀನೊಂದು ಬಿದ್ದಿದೆ.

ಉಚ್ಚಿಲ ಪೆರಿಬೈಲ್ ನಿವಾಸಿ ನಾಡದೋಣಿ ಮೀನುಗಾರರಾದ ಶೈಲೇಶ್ ಉಚ್ಚಿಲ, ಚಂದ್ರ ಉಚ್ಚಿಲ, ಅಝೀಝ್, ಕಲ್ಪೇಶ್ ಮತ್ತು ಶಂಭು ನ್ಯೂ ಉಚ್ಚಿಲ ಎಂಬವರು ಸಮುದ್ರ ತೀರದಲ್ಲಿ ಹಾಕಲಾಗಿದ್ದ ಬಲೆಗೆ ಈ ಪಿಲಿ ತೊರಕೆ ಮೀನು ಬಿದ್ದಿದೆ. ಈ ಬಾರಿ ತಮ್ಮ ಮೀನುಗಾರಿಕೆಯಲ್ಲಿ ದೊರೆತ ಅತಿದೊಡ್ಡ ಮೀನು ಇದಾಗಿದೆ ಎಂದು ಮೀನುಗಾರರು ಹೇಳಿದ್ದಾರೆ. 




ಪ್ರತಿವರ್ಷದಂತೆ ಈ ಬಾರಿಯೂ ಸಮುದ್ರದಲ್ಲಿ ಕೆಸರಿನಂತಹ ಅಲೆಗಳು ಬರುತ್ತಿದೆ. ಈ ನೀರಿಗೆ ಮೀನುಗಾರಿಕೆಯಲ್ಲಿ ಅತ್ಯಂತ ಪಾವಿತ್ರ್ಯತೆ ಇದೆ. ಅದರಲ್ಲಿ ಹಲವು ಬಗೆಯ ಮೀನುಗಳು ಬರುವ ಐತಿಹ್ಯವಿದೆ. ಆದರೆ ಈ ಬಾರಿ  ದೊಡ್ಡ ಗಾತ್ರದ ಪಿಲಿತೊರಕೆ ಬಂದಿರುವುದು ಮೀನುಗಾರರಲ್ಲಿ ಉತ್ಸಾಹ ಮೂಡಿಸಿದೆ. ವ್ಯಾಪಾರ ಮಾಡುತ್ತಿದ್ದರೆ ಕೆಜಿಗೆ 200 ರೂಪಾಯಿಯಷ್ಟು ಮೌಲ್ಯವಿರುವ ಮೀನು ಇದಾಗಿದೆ. ಆದರೆ ಈದ್ ಹಬ್ಬ ಇರುವುದರಿಂದ ಈ ಮೀನನ್ನು ವ್ಯಾಪಾರ ಮಾಡದೇ, ಮೀನುಗಾರರು ತಮ್ಮೊಳಗೆ ಹಂಚಿಕೊಂಡಿದ್ದಾರೆ.
BREAKING NEWS
Loading latest news...
Join our WhatsApp Channel Powered By : Online Pudu