ಸ್ಟೇಟ್‌ಬ್ಯಾಂಕ್ ಆಫ್ ಇಂಡಿಯಾದಲ್ಲಿ 2000 ಪ್ರೊಬೇಷನರಿ ಆಫೀಸರ್‌ಗಳ ಹುದ್ದೆಗೆ ಅರ್ಜಿ ಆಹ್ವಾನ
ಸ್ಟೇಟ್‌ಬ್ಯಾಂಕ್ ಆಫ್ ಇಂಡಿಯಾದಲ್ಲಿ 2000 ಪ್ರೊಬೇಷನರಿ ಆಫೀಸರ್‌ಗಳ ಹುದ್ದೆಗೆ ಅರ್ಜಿ ಆಹ್ವಾನ
ದೇಶದ ಅತ್ಯಂತ ಪ್ರತಿಷ್ಠಿತ ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಒಂದಾಗಿರುವ ಸ್ಟೇಟ್‌ಬ್ಯಾಂಕ್ ಆಫ್ ಇಂಡಿಯಾದಲ್ಲಿ ಆಫೀಸರ್ ಹುದ್ದೆಗಳಿಗೆ ಅರ್ಹಿ ಆಹ್ವಾನಿಸಲಾಗಿದೆ.
ಬ್ಯಾಂಕಿನಲ್ಲಿ ಒಟ್ಟು 2000 ಪ್ರೊಬೇಷನರಿ ಆಫೀಸರ್‌ಗಳ ಹುದ್ದೆ ಖಾಲಿ ಇದ್ದು, ಈ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಯನ್ನು ಆನ್‌ಲೈನ್‌ನಲ್ಲಿ ಮಾತ್ರ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ಈ ಪೈಕಿ ಪರಿಶಿಷ್ಟ ಜಾತಿಗೆ 300 ಹುದ್ದೆಗಳು, ಪರಿಶಿಷ್ಟ ಪಂಗಡದವರಿಗೆ 150 ಹುದ್ದೆಗಳು, ಹಿಂದುಳಿದ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಗೆ 540 ಹುದ್ದೆಗಳು, ಸಾಮಾನ್ಯ ವರ್ಗದವರಿಗೆ 810 ಹುದ್ದೆಗಳು ಹಾಗೂ ಆರ್ಥಿಕವಾಗಿ ಹಿಂದುಳಿದ ದುರ್ಬಲ ವರ್ಗದವರಿಗೆ 200 ಹುದ್ದೆಗಳನ್ನು ಮೀಸಲಿಡಲಾಗಿದೆ.
ಶೈಕ್ಷಣಿಕ ಅರ್ಹತೆ: ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆ ಯಾ ವಿಶ್ವವಿದ್ಯಾನಿಲಯದಿಂದ ಯಾವುದೇ ವಿಷಯದಲ್ಲಿ ಪದವಿ ಪಡೆದಿರಬೇಕು.
ಅಂತಿಮ ವರ್ಷದ ಸೆಮಿಸ್ಟರ್‌ನಲ್ಲಿ ಇರುವವರು ತಾತ್ಕಾಲಿಕವಾಗಿ ಅರ್ಜಿ ಸಲ್ಲಿಸಬಹುದು.
ವಯೋಮಿತಿ- 21ರಿಂದ 35 ವರ್ಷಗಳು (ವಯೋಮಿತಿಯಲ್ಲಿ ನಿಯಮಾನುಸಾರ ಸಡಿಲಿಕೆ ಇದೆ.)
ರಾಜ್ಯದಲ್ಲಿ 13 ಕೇಂದ್ರಗಳಲ್ಲಿ ಪರೀಕ್ಷಾ ಕೇಂದ್ರಗಳು:
ರಾಜ್ಯದ 13 ವಿವಿಧ ಕೇಂದ್ರಗಳಲ್ಲಿ ಪರೀಕ್ಷಾ ಕೇಂದ್ರಗಳಿದ್ದು, ಅಭ್ಯರ್ಥಿಗಳು ತಮ್ಮ ಪರೀಕ್ಷಾ ಕೇಂದ್ರವನ್ನು ಆರಿಸಬಹುದಾಗಿದೆ.
ಬೆಳಗಾವಿ, ಬೆಂಗಳೂರು, ಬೀದರ್, ದಾವಣಗೆರೆ, ಧಾರವಾಡ, ಕಲಬುರ್ಗಿ, ಹಾಸನ, ಹುಬ್ಬಳ್ಳಿ, ಮಂಡ್ಯ, ಮಂಗಳೂರು, ಮೈಸೂರು, ಶಿವಮೊಗ್ಗ, ಹಾಗೂ ಉಡುಪಿಯಲ್ಲಿ ನೇಮಕಾತಿ ಕುರಿತ ಪ್ರಿಲಿಮಿನರಿ ಪರೀಕ್ಷೆ ನಡೆಯಲಿದೆ.
ಮುಖ್ಯ ಪರೀಕ್ಷೆ ಬೆಂಗಳೂರಿನಲ್ಲಿ ಮಾತ್ರ ನಡೆಯಲಿದೆ. ಅರ್ಜಿ ಸಲ್ಲಿಸಲು ಸೆಪ್ಟಂಬರ್ 27, 2023 ಕಡೆಯ ದಿನಾಂಕವಾಗಿರುತ್ತದೆ.
ಹೆಚ್ಚಿನ ಮಾಹಿತಿಗೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಅಂತರ್ಜಾಲ ಸಂಪರ್ಕಿಸಬಹುದು.