MANGALORE- ಡೆಂಗ್ಯು ಜ್ವರಕ್ಕೆ 25 ವರ್ಷದ ಯುವತಿ ಸಾವು


ಮಂಗಳೂರು: ಶಂಕಿತ ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ ಯುವತಿಯೋರ್ವಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ದಲ್ಲಿ
ನಡೆದಿದೆ.

 ಬಂಟ್ವಾಳ ತಾಲೂಕಿನ ಪೆರುವಾಯಿ ನಿವಾಸಿ ಆಶಾ ( 25) ಮೃತಪಟ್ಟ ಯುವತಿ. ಆಶಾ ಅವರು ಕೆಲವು ದಿನಗಳಿಂದ ಜ್ವರದಿಂದ ಬಳಲುತ್ತಿದ್ದರು ಎನ್ನಲಾಗಿದ್ದು, ಜ್ವರ ಉಲ್ಬಣಗೊಂಡ ಹಿನ್ನೆಲೆಯಲ್ಲಿ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.


ಆದರೆ ಚಿಕಿತ್ಸೆ ‌ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಆದರೆ ಜ್ವರದ ಬಗ್ಗೆ ವೈದ್ಯರು ಸ್ಪಷ್ಟವಾದ ಮಾಹಿತಿ ನೀಡುತ್ತಿಲ್ಲ. ಶಂಕಿತ ಡೆಂಗ್ಯೂ ಜ್ವರದಿಂದ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ.
BREAKING NEWS
Loading latest news...
Join our WhatsApp Channel Powered By : Online Pudu