Mangalore- 90ಲಕ್ಷ ಮೌಲ್ಯದ ತಿಮಿಂಗಿಲ ವಾಂತಿ ಮಾರಾಟ ಮಾಡಲು ಯತ್ನ

ಮಂಗಳೂರು: ನಗರದ ಪಣಂಬೂರು ಕಡಲ ಕಿನಾರೆ ಬಳಿ ನಿಷೇಧಿತ ತಿಮಿಂಗಿಲ ವಾಂತಿ  ಮಾರಾಟ ಮಾಡಲು ಯತ್ನಿಸುತ್ತಿದ್ದ  ಮೂವರನ್ನು ಪೊಲೀಸರು  ಬಂಧಿಸಿದ್ದಾರೆ.

 ಮಂಗಳೂರು ನಗರ ಅಪರಾಧ ವಿಭಾಗದ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿ 90 ಲಕ್ಷ ರೂ. ಮೌಲ್ಯದ ತಿಮಿಂಗಿಲ ವಾಂತಿಯನ್ನು ವಶಪಡಿಸಿಕೊಂಡಿದ್ದಾರೆ.

ಉಡುಪಿ ಜಿಲ್ಲೆಯ ಸಾಲಿಗ್ರಾಮ ಗ್ರಾಮದ ನಿವಾಸಿ ಜಯಕರ (39) ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕು ನಿವಾಸಿ ಆದಿತ್ಯ (25), ಹಾವೇರಿ ಜಿಲ್ಲೆಯ ಶಿಗ್ಗಾಂವ್ ತಾಲೂಕು ನಿವಾಸಿ ಲೋಹಿತ್ ಕುಮಾರ್ ಗುರಪ್ಪನವರ್ (39) ಬಂಧಿತರು.

 ಮಂಗಳೂರು ನಗರ ಅಪರಾಧ ವಿಭಾಗದ ಪೊಲೀಸರುಖಚಿತ ಮಾಹಿತಿ ಮೇರೆಗೆ  ಪಣಂಬೂರು ಬೀಚ್ ಬಳಿ ಸೋಮವಾರ ದಾಳಿ ನಡೆಸಿ ತಿಮಿಂಗಿಲ ವಾಂತಿ ಹೊಂದಿದ್ದ ಮೂವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ತಿಮಿಂಗಿಲ ವಾಂತಿ ಅಪರೂಪದ ವನ್ಯಜೀವಿ ಉತ್ಪನ್ನವಾಗಿದ್ದು ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಹೆಚ್ಚು ಬೆಲೆಯುಳ್ಳದ್ದಾಗಿದೆ. ಪೊಲೀಸರು ಆರೋಪಿಗಳಿಂದ 900 ಗ್ರಾಂ ತೂಕದ 90 ಲಕ್ಷ ರೂ. ಮೌಲ್ಯದ ತಿಮಿಂಗಿಲ ವಾಂತಿ ಅನ್ನು ವಶಪಡಿಸಿಕೊಂಡಿದ್ದಾರೆ.  

ಈ ಬಗ್ಗೆ ಪ್ರಕರಣ ದಾಖಲಿಸಿರುವ ಪೊಲೀಸರು ತನಿಖೆ ಮುಂದುವರಿಸಿದ್ಧಾರೆ.
BREAKING NEWS
Loading latest news...
Join our WhatsApp Channel Powered By : Online Pudu