ಕಾಸರಗೋಡು- MBBS ವಿದ್ಯಾರ್ಥಿನಿ ರಸ್ತೆ ಅಪಘಾತದಲ್ಲಿ ಮೃತ್ಯು

ಕಾಸರಗೋಡು:  ಸ್ಕೂಟರ್ ನಿಯಂತ್ರಣ ತಪ್ಪಿ ರಸ್ತೆಯ ಹೊಂಡದಲ್ಲಿ ಸಿಲುಕಿದ ಪರಿಣಾಮ ಹೊಂಡಕ್ಕೆ ಬಿದ್ದು MBBS ವಿದ್ಯಾರ್ಥಿನಿ ಮೃತಪಟ್ಟ ಘಟನೆ ಕಾಸರಗೋಡಿನಲ್ಲಿ  ನಡೆದಿದೆ.



ಕಣ್ಣೂರು ಚೇಂಬರ್ ಆಫ್ ಕಾಮರ್ಸ್ ನ ಮಾಜಿ ಅಧ್ಯಕ್ಷ, ಕಣ್ಣೂರು ಸೈಂಟ್ ಮೈಕಲ್ ಶಾಲಾ ಸಮೀಪದ ಮಹೇಶ್ಚಂದ್ರ ಬಾಳಿಗಾ ಅವರ ಮಗಳು ಶಿವಾನಿ ಬಾಳಿಗಾ ( SHIVANI BALIGA) (20) ಸಾವನ್ನಪ್ಪಿದ ವಿದ್ಯಾರ್ಥಿನಿ.

ಈಕೆ ಮಣಿಪಾಲ ವಿಶ್ವವಿದ್ಯಾನಿಲಯದ MBBS ವಿದ್ಯಾರ್ಥಿನಿಯಾಗಿದ್ದರು.  ಆದಿತ್ಯವಾರ ರಾತ್ರಿ ಕಾಸರಗೋಡು ಚಂದ್ರಗಿರಿ ರಸ್ತೆಯ ಪಿಲಿಕುಂಜೆ ಎಂಬಲ್ಲಿ ಅಪಘಾತ ನಡೆದಿದೆ.


ಸ್ಕೂಟರ್ ನಲ್ಲಿ ತೆರಳುತ್ತಿ ದ್ದಾಗ ರಸ್ತೆಯ ಹೊಂಡಕ್ಕೆ ಬಿದ್ದ ಪರಿಣಾಮ  ಶಿವಾನಿ ರಸ್ತೆಗೆಸೆಯಲ್ಪಟ್ಟ
ಗಂಭೀರ ಗಾಯಾಗೊಂಡಿದ್ದಳು. ಆಕೆಯನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಆದರೆ ಚಿಕಿತ್ಸೆಗೆ ಸ್ಪಂದಿಸದೆ ಸೋಮವಾರ ಸಂಜೆ ಸಾವನ್ನಪ್ಪಿದ್ದಾರೆ. ಕಾಸರಗೋಡು  ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.