-->
ಸುಳ್ಯದ ಮಹಿಳೆಗೆ  ವಿದೇಶದಿಂದಲೆ ವಾಟ್ಸಪ್ ನಲ್ಲಿ  ತಲಾಖ್ ನೀಡಿದ ಪತಿ

ಸುಳ್ಯದ ಮಹಿಳೆಗೆ ವಿದೇಶದಿಂದಲೆ ವಾಟ್ಸಪ್ ನಲ್ಲಿ ತಲಾಖ್ ನೀಡಿದ ಪತಿ


 ಮಂಗಳೂರು: ವಿದೇಶದಲ್ಲಿರುವ ಪತಿ ವಾಟ್ಸಾಪ್  ಮೂಲಕ ಸುಳ್ಯ ಜಯನಗರ ನಿವಾಸಿ ಮಿಸ್ರಿಯಾ ಎಂಬ ಮಹಿಳೆಗೆ  ತ್ರಿವಳಿ ತಲಾಖ್ ನೀಡಿದ ಘಟನೆ ನಡೆದಿದ್ದು ಈ ಬಗ್ಗೆ ದೂರು ದಾಖಲಾಗಿದೆ.

ಕೇರಳ ರಾಜ್ಯದ ತ್ರಿಶೂರ್ ಮೂಲದ ಅಬ್ದುಲ್ ರಶೀದ್ ಏಳು ವರ್ಷಗಳ ಹಿಂದೆ ಸುಳ್ಯ ಜಯನಗರದ ಮಿಸ್ರಿಯಾ ಎಂಬಾಕೆಯನ್ನು ವಿವಾಹವಾಗಿದ್ದನು. ಇವರಿಗೆ 2 ಹೆಣ್ಣು ಮಕ್ಕಳಿದ್ದಾರೆ.  2 ವರ್ಷ ಹಿಂದೆ ಮಿಸ್ರಿಯಾ ಅವರನ್ನು ವಿದೇಶಕ್ಕೆ ಕರೆಸಿಕೊಂಡಿದ್ದನು.  ಆ ಬಳಿಕ 2  ನೇ ಮಗುವಿನ ಹೆರಿಗೆಗಾಗಿ ಸುಳ್ಯಕ್ಕೆ ಕರೆತಂದು ಪತ್ನಿಯ ತವರು ಮನೆಯಲ್ಲಿ ಬಿಟ್ಟು ವಿದೇಶಕ್ಕೆ ತೆರಳಿದ್ದನು.

ಆದರೆ ಕಳೆದ 6 ತಿಂಗಳಿನಿಂದ ಇವರ ಸಂಸಾರದಲ್ಲಿ ವಿರಸ ಉಂಟಾಗಿತ್ತು. ಈ ಬಗ್ಗೆ ಸಂಬಂಧಿಕರು, ಹಿರಿಯರು ಮಾತನಾಡಿ, ಸಮಸ್ಯೆ ಬಗೆಹರಿಸಲು ಪ್ರಯತ್ನ ಪಟ್ಟಿದ್ದರು. ಆದರೆ ಇದಕ್ಕೆ ಆಸ್ಪದ ನೀಡದ ಅಬ್ದುಲ್ ರಶೀದ್, ಪತ್ನಿಯ ಮೊಬೈಲ್‌ಗೆ ವಾಟ್ಸಾಪ್ ಮೂಲಕ ತ್ರಿವಳಿ ತಲಾಖ್‌ನ ಸಂದೇಶ ಕಳುಹಿಸಿದ್ದಾನೆ. ಇದರಿಂದ ಮನನೊಂದ ಮಿಸ್ರಿಯಾ ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ

Ads on article

Advertise in articles 1

advertising articles 2

ಉಚಿತವಾಗಿ ಸುದ್ದಿ ಕೊಡುತ್ತಿರುವ ನಮಗೆ ಸಹಾಯ ಮಾಡಿ

  

Pay Rs 100

  

Advertise under the article