-->

"ಯಾನ್ ಸೂಪರ್ ಸ್ಟಾರ್" ತುಳು ಸಿನಿಮಾ ಕರಾವಳಿಯಾದ್ಯಂತ ಬಿಡುಗಡೆ

"ಯಾನ್ ಸೂಪರ್ ಸ್ಟಾರ್" ತುಳು ಸಿನಿಮಾ ಕರಾವಳಿಯಾದ್ಯಂತ ಬಿಡುಗಡೆ



ಮಂಗಳೂರು: ಆನಂದ ಫಿಲಂಸ್ ಮತ್ತು ದಿ ಮಂಗಳೂರಿಯನ್ಸ್  ಲಾಂಛನದಲ್ಲಿ ರಾಮ್ ಶೆಟ್ಟಿ ಅರ್ಪಿಸುವ,  ದಯಾನಂದ ಶೆಟ್ಟಿ ನಿರ್ಮಾಣ, ಸಂತೋಷ್ ಶೆಟ್ಟಿ ನಿರ್ದೇಶನದಲ್ಲಿ ತಯಾರಾದ "ಯಾನ್ ಸೂಪರ್ ಸ್ಟಾರ್" ಸಿನಿಮಾ ನಗರದ ಬಿಗ್ ಸಿನೆಮಾಸ್ ನಲ್ಲಿ ಬಿಡುಗಡೆಗೊಂಡಿತು. ಕಾರ್ಯಕ್ರಮವನ್ನು ಅತಿಥಿಗಳು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಲಾಯಿತು.



ಬಳಿಕ ಮಾತಾಡಿದ ಮುಂಬಯಿ ವಿ.ಕೆ. ಸಮೂಹ ಸಂಸ್ಥೆಯ ಅಧ್ಯಕ್ಷ, ಆಡಳಿತ ನಿರ್ದೇಶಕ ಕರುಣಾಕರ ಎಂ. ಶೆಟ್ಟಿ ಮಧ್ಯಗುತ್ತು ಅವರು "ಯಾನ್ ಸೂಪರ್ ಸ್ಟಾರ್ ಸಿನಿಮಾ ಇಂದಿನ ಶುಭ ಮುಹೂರ್ತದಲ್ಲಿ ಬಿಡುಗಡೆಯಾಗಿದೆ. ತುಳುವರು ಈ ಸಿನಿಮಾವನ್ನು ಇಷ್ಟಪಟ್ಟು ಗೆಲ್ಲಿಸಬೇಕು. ಈ ಸಿನಿಮಾ ಎಲ್ಲೆಡೆ ಯಶಸ್ವಿ ಪ್ರದರ್ಶನ ಕಾಣಲಿ. ಮುಂದೆಯೂ ಈ ತಂಡ ಇನ್ನಷ್ಟು ಉತ್ತಮ ಗುಣಮಟ್ಟದ ಸಿನಿಮಾ ಮಾಡಿ ಜನಮನ್ನಣೆ ಪಡೆಯಲಿ" ಎಂದರು.


ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಮಾತನಾಡಿ, "ಈ ಸಿನಿಮಾ ಮುಂಬೈ ತುಳುವರಿಂದ ಪ್ರಶಂಸೆಗೊಳಪಟ್ಟ ಸಿನಿಮಾ. ಇದರಲ್ಲಿ ತುಳುನಾಡಿನ ಅನೇಕ ದಿಗ್ಗಜ ಕಲಾವಿದರು ನಟಿಸಿದ್ದಾರೆ. ಎಲ್ಲರೂ ಚೆನ್ನಾಗಿ ನಟಿಸಿದ್ದಾರೆ. ಯಾವುದೇ ತುಳು ಸಿನಿಮಾ ಬಂದರೂ ತುಳುವರು ಸೋಲಲು ಬಿಡುವುದಿಲ್ಲ ಅನ್ನೋ ನಂಬಿಕೆ ನಮ್ಮಲ್ಲಿದೆ. ತುಳುನಾಡಿನ ದೈವ ದೇವರ ಆಶೀರ್ವಾದದಿಂದ ಸಿನಿಮಾ ಯಶಸ್ಸು ಕಾಣಲಿ" ಎಂದರು. 
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಉಪಾಧ್ಯಕ್ಷ ಕರ್ನಿರೆ ವಿಶ್ವನಾಥ್ ಶೆಟ್ಟಿ ಮಾತನಾಡಿ, "ಮುಂಬೈ ತುಳುವರು ಒಟ್ಟಾಗಿ ಒಂದೊಳ್ಳೆ ಸಿನಿಮಾ ನಮ್ಮ ಮುಂದೆ ತಂದಿದ್ದಾರೆ. ಎಲ್ಲರೂ ಸಿನಿಮಾ ನೋಡಿ ಪ್ರೋತ್ಸಾಹಿಸಿ" ಎಂದರು.


ಡಾ. ದೇವದಾಸ್ ಕಾಪಿಕಾಡ್ ಮಾತಾಡಿ, "ಮುಂಬೈಯಲ್ಲಿದ್ದ ತುಳುವರು ನಮ್ಮ ತುಳುನಾಡಿನ ಮೇಲೆ ಪ್ರೀತಿಯಿಟ್ಟು ಸಿನಿಮಾ ಮಾಡಿದ್ದಾರೆ. ಅವರನ್ನು ತುಳುವರು ಸೋಲಲು ಬಿಡಬಾರದು. ಎಲ್ಲರೂ ಸಿನಿಮಾ ನೋಡಿ ಗೆಲ್ಲಿಸಿ" ಎಂದರು. ಸಮಾರಂಭದಲ್ಲಿ  ವಿಜಯ್ ಕುಮಾರ್ ಕೊಡಿಯಾಲ್ ಬೈಲ್, ಶಿವಧ್ವಜ್ ಶೆಟ್ಟಿ, ಜಯರಾಮ ಶೇಖ, ಅಡ್ಯಾರ್ ಮಾಧವ ನಾಯ್ಕ್, ಗಿರೀಶ್ಎಂ  ಶೆಟ್ಟಿ ಕಟೀಲು, ಹರೀಶ್ ವಾಸು ಶೆಟ್ಟಿ, ಮಾನಸಿ ಸುಧೀರ್, ಸಂಗೀತ ನಿರ್ದೇಶಕ ವಿ. ಮನೋಹರ್, ನವೀನ್ ಡಿ. ಪಡೀಲ್, ದಯಾನಂದ ಶೆಟ್ಟಿ, ತಮ್ಮ ಲಕ್ಷ್ಮಣ, ರಾಮ್ ಶೆಟ್ಟಿ ಮುಂಬೈ,  ಬಾಳ ಜಗನ್ನಾಥ ಶೆಟ್ಟಿ, ಭೋಜರಾಜ್ ವಾಮಂಜೂರ್ , ಮೋಹನ್ ಕೊಪ್ಪಲ ಮತ್ತಿತರರು ಉಪಸ್ಥಿತರಿದ್ದರು. ಭಾಗ್ಯರಾಜ್ ಶೆಟ್ಟಿ ಕಾರ್ಯಕ್ರಮ‌ ನಿರ್ವಹಿಸಿದರು. 


ಯಾನ್ ಸೂಪರ್ ಸ್ಟಾರ್ ಸಿನಿಮಾ ಮಂಗಳೂರಿನಲ್ಲಿ ರೂಪವಾಣಿ, ಭಾರತ್ ಸಿನಿಮಾಸ್, ಪಿವಿಆರ್, ಸಿನಿಪೊಲಿಸ್, ಉಡುಪಿಯಲ್ಲಿ ಕಲ್ಪನ, ಮಣಿಪಾಲದಲ್ಲಿ ಐನಾಕ್ಸ್, ಭಾರತ್ ಸಿನಿಮಾಸ್, ಪಡುಬಿದ್ರೆಯಲ್ಲಿ ಭಾರತ್ ಸಿನಿಮಾಸ್, ಕಾರ್ಕಳದಲ್ಲಿ ರಾಧಿಕಾ, ಪ್ಲಾನೆಟ್, ಬೆಳ್ತಂಗಡಿಯಲ್ಲಿ ಭಾರತ್,  ಸುರತ್ಕಲ್ ನಲ್ಲಿ ನಟರಾಜ್, ಸಿನಿಗ್ಯಾಲಕ್ಸಿ, ಪುತ್ತೂರಿನಲ್ಲಿ ಭಾರತ್ ಸಿನಿಮಾಸ್, ಸುಳ್ಯದಲ್ಲಿ ಸಂತೋಷ್  ಚಿತ್ರಮಂದಿರದಲ್ಲಿ ಸಿನಿಮಾ ತೆರೆಕಂಡಿದೆ. 

ಮನರಂಜನೆಯ ಸಿನಿಮಾ!
ಯಾನ್ ಸೂಪರ್ ಸ್ಟಾರ್ ಹೆಸರು ಸೂಚಿಸಿರುವಂತೆ ಇದು ತುಳುವಿನಲ್ಲಿ ಹೊಸ ಬಗೆಯ ಸಿನಿಮಾ. ಪ್ರೇಕ್ಷಕರ ನಾಡಿ ಮಿಡಿತವನ್ನು ಅರಿತು ಸಿನಿಮಾದ ಕತೆಯನ್ನು ಹೆಣೆಯಲಾಗಿದೆ. ಸಿನಿಮಾದಲ್ಲಿ ಹಾಸ್ಯದ ಜೊತೆಗೆ ಉತ್ತಮ ಸಂದೇಶವೂ ಇದೆ ಎಂದು ನಿರ್ದೇಶಕ ಸಂತೋಷ್ ಶೆಟ್ಟಿ ತಿಳಿಸಿದರು.

Ads on article

🎁 Amazon Prime ಸದಸ್ಯರಾಗಿರಿ

Amazon Prime Offer
👉 ಉಚಿತ shipping, Prime Video, shopping deals—all in one!

Disclosure: ಈ ಲಿಂಕ್ Amazon Affiliate Program ನ ಭಾಗವಾಗಿದೆ. ನೀವು ಈ ಲಿಂಕ್ ಮೂಲಕ Prime ಸದಸ್ಯರಾಗಿದರೆ, ನಮಗೆ commission ಸಿಗಬಹುದು.

Advertise in articles 1

advertising articles 2

Advertise under the article