ಬೆಳ್ತಂಗಡಿ: ಬೈಕ್ ಡಿಕ್ಕಿಯಾಗಿ 8ವರ್ಷದ ಬಾಲಕಿ ಮೃತ್ಯು


ಬೆಳ್ತಂಗಡಿ: ಬೈಕ್ ಢಿಕ್ಕಿಯಾದ ಪರಿಣಾಮ ಶಾಲಾ ವಿದ್ಯಾರ್ಥಿನಿಯೊಬ್ಬಳು ಮೃತಪಟ್ಟ ಘಟನೆ ಉಜಿರೆ ಸಮೀಪದ ಬದನಾಜೆಯಲ್ಲಿ ಶುಕ್ರವಾರ ಸಂಜೆ ನಡೆದಿದೆ.

ಸ್ಥಳೀಯ ನಿವಾಸಿ ಅಶೋಕ್ ಅವರ ಪುತ್ರಿ ಮೂರನೇ ತರಗತಿಯ ವಿದ್ಯಾರ್ಥಿನಿ ಅಂಕಿತಾ (8) ಮೃತ ವಿದ್ಯಾರ್ಥಿನಿ. ಸಂಜೆ ಶಾಲೆ ಬಿಟ್ಟು ಮನೆಗೆ ಹೋಗುವತ್ತಿದ್ದ ವೇಳೆ ಅಂಕಿತಾ ರಸ್ತೆ ದಾಟುತ್ತಿದ್ದರು. ಈ ವೇಳೆ ಆಕೆಗೆ ಬೈಕ್ ಢಿಕ್ಕಿ ಹೊಡೆದಿತ್ತು.

ಈ ಬಗ್ಗೆ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಬೈಕ್ ಸವಾರ ವಿಕಾಸ್ ವಿರುದ್ಧ ದೂರು ದಾಖಲಾಗಿದೆ.
BREAKING NEWS
Loading latest news...
Join our WhatsApp Channel Powered By : Online Pudu