ಮಾರಕಾಯುಧದಿಂದ ಕಡಿದು ತಂದೆಯನ್ನೇ ಕೊಲೆಗೈದ ಪುತ್ರ ಅರೆಸ್ಟ್

ಬ್ರಹ್ಮಾವರ: ಇಲ್ಲಿನ ಪೆಜಮಂಗೂರು ಗ್ರಾಮದ ಮೊಗವೀರಪೇಟೆಯಲ್ಲಿ ಕ್ಷುಲ್ಲಕ ಕಾರಣಕ್ಕೆ ಜನ್ಮಕೊಟ್ಟ ತಂದೆಯನ್ನೇ ಮಾರಕಾಯುಧದಿಂದ ಕಡಿದು ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಪುತ್ರನನ್ನು ಬ್ರಹ್ಮಾವರ ಪೊಲೀಸರು ಬಂಧಿಸಿದ್ದಾರೆ.

ಆನಂದ ಮರಕಾಲ(50) ಬಂಧಿತ ಆರೋಪಿ. ಪೊಲೀಸರು ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ.

ಆನಂದ ಮರಕಾಲ ತನ್ನ ತಂದೆ ಸಾಧು ಮರಕಾಲ(68)ರನ್ನು ಅ.7ರಂದು ಮಧ್ಯಾಹ್ನ ಮನೆಯಲ್ಲಿ ಕತ್ತಿಯಿಂದ ಕಡಿದು ಕೊಲೆಗೈದು ಪರಾರಿಯಾಗಿದ್ದನು. ತನಿಖಾಧಿಕಾರಿ ಬ್ರಹ್ಮಾವರ ಪೊಲೀಸ್ ವೃತ್ತ ನಿರೀಕ್ಷಕ ದಿವಾಕರ್ ಪಿ.ಎಂ. ನೇತೃತ್ವದಲ್ಲಿ ಆರೋಪಿಯನ್ನು ಉಪ್ಪರು ಎಂಬಲ್ಲಿ ಬಂಧಿಸಿದ್ದಾರೆ.

ಆನಂದ ಮರಕಾಲ ಮನೆಗೆ ಬಂದು ತಂದೆಯೊಂದಿಗೆ ಆಗ್ಗಾಗೆ ಗಲಾಟೆ ಮಾಡುತ್ತಿದ್ದ. ಸಾಧು ಅವರನ್ನು ಮನೆಯಿಂದ ಹೊರ ಹಾಕಬೇಕೆಂದು ದ್ವೇಷವನ್ನು ಹೊಂದಿದ್ದನು. ಇದೇ ದ್ವೇಷದಿಂದ ಆತ ತಂದೆಯನ್ನು ಕೊಲೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

BREAKING NEWS
Loading latest news...
Join our WhatsApp Channel Powered By : Online Pudu