ಮಂಗಳೂರು: ವಿಮಾನ ನಿಲ್ದಾಣದಲ್ಲಿ ಅಕ್ರಮ ಸಾಗಾಟ ಮಾಡುತ್ತಿದ್ದ ಗೋಲ್ಡ್ ಸೀಝ್

ಮಂಗಳೂರು: ಅ‌ಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಹಿಳೆಯೊಬ್ಬಳು ಗುದದ್ವಾರದಲ್ಲಿ ಬಚ್ಚಿಟ್ಟು ಅಕ್ರಮವಾಗಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು‌ ವಶಪಡಿಸಿಕೊಂಡಿದ್ದಾರೆ.

ಅಕ್ಟೋಬರ್ 4ರಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನ IX 814 ಮೂಲಕ ಈಕೆ ದುಬೈನಿಂದ ಮಂಗಳೂರಿಗೆ ಪ್ರಯಾಣಿಸುತ್ತಿದ್ದಳು. ಮಹಿಳೆಯನ್ನು ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ಮಾಡಿದಾಗ ಗುದದ್ವಾರದಲ್ಲಿ ಬಚ್ಚಿಟ್ಟು ಚಿನ್ನ ಸಾಗಾಟ ಮಾಡುತ್ತಿರುವುದು ಪತ್ತೆಯಾಗಿದೆ. ಈಕೆ 2 ಗೋಳಾಕಾರದ ಪೇಸ್ಟ್ ನೊಳಗೆ ಚಿನ್ನವನ್ನು ಬಚ್ಚಿಟ್ಟು ಸಾಗಾಟ ಮಾಡುತ್ತಿದ್ದಳು. ತನಿಖೆಯ ವೇಳೆ ಈಕೆಯಲ್ಲಿ 349 ಗ್ರಾಂ ತೂಕದ 24 ಕ್ಯಾರೆಟ್ ಶುದ್ಧತೆಯ ಚಿನ್ನ ಪತ್ತೆಯಾದೆ. ಇದರ ಮೌಲ್ಯ  20,41,650 ರೂ. ಎಂದು ಅಂದಾಜಿಸಲಾಗಿದೆ. ಮಹಿಳೆಯನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ಮುಂದುವರಿಸಲಾಗಿದೆ.
BREAKING NEWS
Loading latest news...
Join our WhatsApp Channel Powered By : Online Pudu