ಮಂಗಳೂರು: ಮೀನುಗಾರಿಕಾ ಬೋಟ್ ನಲ್ಲಿ ಭಾರೀ ಬೆಂಕಿ ಅವಘಡ - ಕೋಟ್ಯಾಂತರ ರೂ. ನಷ್ಟ

ಮಂಗಳೂರು: ಆಕಸ್ಮಿಕವಾಗಿ ಬೆಂಕಿ ತಗುಲಿ ಮೀನುಗಾರಿಕಾ ಬೋಟೊಂದು ಸಂಪೂರ್ಣ ಭಸ್ಮವಾಗಿರುವ ಘಟನೆ ಮಂಗಳೂರು ನಗರದ ಬೆಂಗ್ರೆಯ ಮೀನುಗಾರಿಕಾ ಬಂದರಿಲ್ಲಿ ಇಂದು ನಸುಕಿನ ವೇಳೆ 4.30ರ ಸುಮಾರಿಗೆ ಸಂಭವಿಸಿದೆ. 


ಅರುಣ್ ಎಂಬವರು ನಡೆಸುತ್ತಿದ್ದ ಈ ಬೋಟ್ ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ನೋಡನೋಡುತ್ತಿದ್ದಂತೆ ಬೆಂಕಿ ಬೋಟ್ ಪೂರ್ತಿ ವ್ಯಾಪಿಸಿರುವ ಹಿನ್ನಲೆಯಲ್ಲಿ ಕೋಟ್ಯಾಂತರ ರೂ. ಮೌಲ್ಯದ ವಸ್ತುಗಳು ನಾಶಗೊಂಡಿದೆ. ಬಂದರಿನಲ್ಲಿ ಲಂಗರು ಹಾಕಿರುವ ಇನ್ನಷ್ಟು ಬೋಟ್ ಗಳಿಗೆ ಬೆಂಕಿ ಹರಡುವ ಸಾಧ್ಯತೆಯಿದ್ದ ಹಿನ್ನೆಲೆಯಲ್ಲಿ ಸ್ಥಳೀಯರು ಬೆಂಕಿ ತಗುಲಿದ ಬೋಟನ್ನು ಬಂದರಿನಿಂದ ನದಿಯೆಡೆಗೆ ಕೊಂಡೊಯ್ದಿದ್ದಾರೆ.


ಇದರಿಂದ ಇನ್ನಷ್ಟು ಅನಾಹುತಗಳು ತಪ್ಪಿದಂತಾಗಿದೆ. ಕದ್ರಿ ಮತ್ತು ಪಾಂಡೇಶ್ವರ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯಾಚರಣೆ