-->
ಮಂಗಳೂರು: ಬಸ್ ನಡಿ ಬಿದ್ದು ಪಾದಚಾರಿ ದಾರುಣ ಸಾವು

ಮಂಗಳೂರು: ಬಸ್ ನಡಿ ಬಿದ್ದು ಪಾದಚಾರಿ ದಾರುಣ ಸಾವು


ಮಂಗಳೂರು: ಖಾಸಗಿ ಬಸ್ಸೊಂದು ಢಿಕ್ಕಿ ಹೊಡೆದ ಪರಿಣಾಮ ಅವರು ಬಸ್ ನ ಚಕ್ರದಡಿ ಸಿಲುಕಿ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನಗರದ ಸ್ಟೇಟ್‌ಬ್ಯಾಂಕ್ ಬಳಿಯ ರಾವ್ ಅಂಡ್ ರಾವ್ ಸರ್ಕಲ್ ನಲ್ಲಿ ನಡೆದಿದೆ.

ನಗರದ ಹೊರವಲಯದ ಕೊಣಾಜೆಯ ಹೂಹಾಕುವ ಕಲ್ಲು ಎಂಬಲ್ಲಿಗೆ ತೆರಳುತ್ತಿದ್ದ ಖಾಸಗಿ ಬಸ್ ರಾವ್ ಆ್ಯಂಡ್ ರಾವ್ ಸರ್ಕಲ್ ನಲ್ಲಿ ತಿರುವು ತೆಗೆದುಕೊಳ್ಳುತ್ತಿತ್ತು. ಅದೇ ಹೊತ್ತಿಗೆ ವ್ಯಕ್ತಿಯೊಬ್ಬರು ರಸ್ತೆ ದಾಟುತ್ತಿದ್ದರು. ಆಗ ನೇರವಾಗಿ ಬಂದ ಬಸ್ ನ ಮುಂದಿನ ಚಕ್ರದಡಿಗೆ ಬಿದ್ದ ಅವರು ಸ್ಥಳದಲ್ಲಿಯೇ ದಾರುಣವಾಗಿ ಮೃತಪಟ್ಟಿದ್ದಾರೆ.

ಬಸ್ ನಡಿಗೆ ಬಿದ್ದ ಪರಿಣಾಮ ಅವರ ತಲೆ ಪೂರ್ತಿ ಛಿದ್ರಗೊಂಡಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮುಖವೂ ಛಿದ್ರಗೊಂಡಿದ್ದರಿಂದ ಮೃತರ ಪತ್ತೆ ಸಾಧ್ಯವಾಗಿಲ್ಲ. ಖಾಸಗಿ ಬಸ್ ಚಾಲಕನ ನಿರ್ಲಕ್ಷ್ಯದ ಚಾಲನೆಯಿಂದ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದು ಪಾಂಡೇಶ್ವರ ಪೊಲೀಸರು ಸೆಕ್ಷನ್ 304 ಅಡಿ ಕೊಲೆಗೆ ಸಮಾನ ಆಗಬಲ್ಲ ಅಪರಾಧ ಎಸಗಿದ್ದಾಗಿ ಪ್ರಕರಣ ದಾಖಲಿಸಿದ್ದಾರೆ. ಬಸ್ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ.

ವ್ಯಕ್ತಿ 40-42 ವಯಸ್ಸಿನವರು ಎನ್ನಲಾಗುತ್ತಿದ್ದು ಅಪರಿಚಿತನ ಪತ್ತೆಗಾಗಿ ಸಂಶಯ ಇದ್ದವರು ಪಾಂಡೇಶ್ವರ ಠಾಣೆಗೆ ಸಂಪರ್ಕಿಸುವಂತೆ ಪೊಲೀಸರು ತಿಳಿಸಿದ್ದಾರೆ. ಶವವನ್ನು ವೆಸ್ಲಾಕ್ ಆಸ್ಪತ್ರೆಯಲ್ಲಿ ಇಡಲಾಗಿದೆ.

Ads on article

Advertise in articles 1

advertising articles 2

ಉಚಿತವಾಗಿ ಸುದ್ದಿ ಕೊಡುತ್ತಿರುವ ನಮಗೆ ಸಹಾಯ ಮಾಡಿ

  

Pay Rs 100

  

Advertise under the article