ಬ್ರೇಕಿಂಗ್ ನ್ಯೂಸ್

[getTicker results="10" label="recent" type="ticker"]

ಸುಳ್ಯ: ಕಾಡು ಹಣ್ಣು ಶರಬತ್ತು ಸೇವಿಸಿ ಮಹಿಳೆ ಮೃತ್ಯು

ಸುಳ್ಯ: ಮೈರೋಳ್ ಎಂಬ ಕಾಡು ಹಣ್ಣನ್ನು ಸೇವಿಸಬಹುದಾದ ಹಣ್ಣು ಎಂದು ಭಾವಿಸಿ ಮನೆಗೆ ತಂದು ಶರಬತ್ತು ಮಾಡಿ ಸೇವಿಸಿರುವ ಮಹಿಳೆಯೊಬ್ಬರು ತೀವ್ರವಾಗಿ ಅಸ್ವಸ್ಥಗೊಂಡು ಮೃತಪಟ್ಟ ಘಟನೆ ಸುಳ್ಯದಲ್ಲಿ ನಡೆದಿದೆ.

ಅಮರಪಡೂರು ಗ್ರಾಮದ ಕುಳ್ಳಾಜೆ ನಿವಾಸಿ ಲೀಲಾವತಿ(35) ಮೃತಪಟ್ಟ ದುರ್ದೈವಿ. ಇವರ ತಂದೆ ಲೋಕಯ್ಯ ನಾಯ್ಕ ಕೂಡಾ ಹಣ್ಣಿನ ಶರಬತ್ತು ಕುಡಿದು ಅಸ್ವಸ್ಥಗೊಂಡಿದ್ದರು ಎನ್ನಲಾಗಿದೆ.

ಲೀಲಾವತಿ ಹಾಗೂ ಲೋಕಯ್ಯ ನಾಯ್ಕ ಒಂದು ವಾರದ ಹಿಂದೆ ಮೈರೋಳ್ ಹಣ್ಣಿನ ರಸ ತೆಗೆದು ಶರಬತ್ತು ಮಾಡಿ ಸೇವಿಸಿದ್ದರು ಎನ್ನಲಾಗಿದೆ. ಪರಿಣಾಮ ತಂದೆ -ಮಗಳಿಬ್ಬರೂ ಅಸ್ವಸ್ಥಗೊಂಡಿದ್ದರು. ಈ ಪೈಕಿ ವಾಂತಿ, ಭೇದಿ ಕಾಣಿಸಿಕೊಂಡಿದ್ದ ಲೀಲಾವತಿಯನ್ನು ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅಸ್ವಸ್ಥತೆ ತೀವ್ರಗೊಂಡ ಹಿನ್ನಲೆಯಲ್ಲಿ ಸೋಮವಾರ ಅವರನ್ನು ಮಂಗಳೂರಿನ ಆಸ್ಪತ್ರೆಗೆ ಸಾಗಿಸುವ ದಾರಿಮಧ್ಯೆ ಕೊನೆಯುಸಿರೆಳೆದರೆಂದು ತಿಳಿದುಬಂದಿದೆ.

ಮೃತರು ಪತಿ, ಮೂವರು ಮಕ್ಕಳನ್ನು ಅಗಲಿದ್ದಾರೆ.