-->
1000938341
ಈಜಲು ನದಿಗಿಳಿದ ನಾಲ್ವರು ವಿದ್ಯಾರ್ಥಿಗಳು ನೀರುಪಾಲು

ಈಜಲು ನದಿಗಿಳಿದ ನಾಲ್ವರು ವಿದ್ಯಾರ್ಥಿಗಳು ನೀರುಪಾಲು

ಅಮರಾವತಿ: ಈಜಲು ತೆರಳಿರುವ ನಾಲ್ವರು ವಿದ್ಯಾರ್ಥಿಗಳು ನದಿಯಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಆಂಧ್ರಪ್ರದೇಶದ ಕಾಕಿನಾಡ ಜಿಲ್ಲೆಯಲ್ಲಿ ನಡೆದಿದೆ. ಗೌತಮಿ-ಗೊದಾವರಿ ನದಿಗೆ ಈ ವಿದ್ಯಾರ್ಥಿಗಳು ಈಜಲು ತೆರಳಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.

ಕಾಲೇಜಿಗೆ ರಜೆಯಿದ್ದ ಹಿನ್ನಲೆಯಲ್ಲಿ ಏಳು ಮಂದಿ ಪದವಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಗಳು ಜತೆಗೂಡಿ ಪ್ರವಾಸಕ್ಕೆಂದು ಬಂದಿದ್ದರು. ಮೊದಲು ಯಾನಕ್ಕೆ ತೆರಳಿರುವ ವಿದ್ಯಾರ್ಥಿಗಳು ಆ ಬಳಿಕ ಶನಿವಾರ ಸಂಜೆ 4:30ರ ಸುಮಾರಿಗೆ ಈಜಲೆಂದು ಗೊದಾವರಿ ನದಿಗೆ ಇಳಿದಿದ್ದಾರೆ. ಈಜುವ ವೇಳೆ ನೀರು ಉಕ್ಕೇರಿ ಹರಿದಿ ಪರಿಣಾಮ ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.

ನದಿಯಿಂದ ನಾಲ್ವರು ವಿದ್ಯಾರ್ಥಿಗಳ ಮೃತದೇಹಗಳನ್ನು ಮೇಲೆತ್ತಲಾಗಿದೆ. ಇದೀಗ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಪೊಲೀಸ್​ ಅಧಿಕಾರಿಗಳು ತಿಳಿಸಿದ್ದಾರೆ.

ಘಟನೆ ಸಂಬಂಧ CRPC 174ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ತನಿಖೆ ನಡೆಸಲಾಗುತ್ತಿದೆ. ಘಟನೆಗೆ ಸಂಬಂಧಿಸಿದಂತೆ ಶೀಘ್ರದಲ್ಲೇ ಮತ್ತಷ್ಟು ಮಾಹಿತಿಯನ್ನು ನೀಡಲಾಗುವುದು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Ads on article

Advertise in articles 1

advertising articles 2

Advertise under the article