ಶಿವಮೊಗ್ಗ: ತೀರ್ಥಹಳ್ಳಿಯ ಅರಳಸುರಳಿ ಬಳಿಯ ಗಣಪತಿ ಕಟ್ಟೆ ರೈಸ್ ಮಿಲ್ ಬಳಿಯ ಮನೆಯೊಂದರ ಒಂದೇ ಕುಟುಂಬದ ಮೂವರು ಸಜೀವ ದಹನಗೊಂಡ ಹೃದಯ ವಿದ್ರಾವಕ ಘಟನೆ ಶನಿವಾರ ರಾತ್ರಿ ನಡೆದಿದ್ದು, ಇಂದು ಬೆಳಗ್ಗೆ ಬೆಳಕಿಗೆ ಬಂದಿದೆ.
ಅರ್ಚಕ ವೃತ್ತಿಯಲ್ಲಿದ್ದ ರಾಘವೇಂದ್ರ ಕೆಕೋಡ್ (63), ಅವರ ಪತ್ನಿ ನಾಗರತ್ನಾ (55) ಹಾಗೂ ಹಿರಿಯ ಪುತ್ರ ಶ್ರೀರಾಮ್ (34) ಸಜೀವವಾಗಿ ಬೆಂಕಿಗಾಹುತಿಯಾಗಿದ್ದಾರೆ. ಮತ್ತೋರ್ವ ಪುತ್ರ ಭರತ್ (33) ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಮನೆಯ ಕೋಣೆಯಲ್ಲಿ ಕಟ್ಟಿಗೆಗಳನ್ನು ಹಾಕಿಕೊಂಡು ಇವರುವಬೆಂಕಿ ಹಚ್ಚಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಈ ಬಗ್ಗೆ ಇನ್ನೂ ಅಧಿಕೃತ ಮಾಹಿತಿಯಿಲ್ಲ, ಈ ಬೆಂಕಿ ಅವಘಢದ ಬಗ್ಗೆ ಕೆಲವೊಂದು ಅನುಮಾನಗಳಿವೆ. ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು, ತನಿಖೆ ನಡೆಸುತ್ತಿದ್ದಾರೆ.