ಬಜ್ಪೆ: ಇಲ್ಲಿನ ಠಾಣಾ ಪೊಲೀಸರು ವಿವಿಧೆಡೆ ಕಾರ್ಯಾಚರಣೆ ನಡೆಸಿ ಗಾಂಜಾ ಸೇವನೆ ಮಾಡುತ್ತಿದ್ದ ಐವರನ್ನು ಬಂಧಿಸಿದ್ದಾರೆ.
ಗುರುವಾರ ಮಧ್ಯಾಹ್ನದ ಸುಮಾರಿಗೆ ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕಂಜಾರು ಗ್ರಾಮದ ಪೋರ್ಕೊಡಿ ಎಂಬಲ್ಲಿ ಗಾಂಜಾ ಸೇವನೆ ಮಾಡುತ್ತಿದ್ದ ಪೋರ್ಕೊಡಿ ನಿವಾಸಿ ಮೊಹಮ್ಮದ್ ಮುನಾಜ್ ಮತ್ತು ಕಸಬಾ ಬೆಂಗ್ರೆಯ ನಿವಾಸಿ ಮೊಹಮ್ಮದ್ ಆಫ್ರಾರ್ ಎಂಬವರನ್ನು ವಶಕ್ಕೆ ಪಡೆದಿದ್ದಾರೆ. ಬಳಿಕ ಅವರನ್ನು ವೈದ್ಯಕೀಯ ಪರೀಕ್ಷೆಗೊಳಪಡಿಸಿದಾಗ ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದೆ. ಆದ್ದರಿಂದ ಇವರ ವಿರುದ್ಧ ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿರುತ್ತದೆ.
ಅದೇ ರೀತಿ ಕೊಳಂಬೆ ಗ್ರಾಮದ ಫನಾ ಕಾಲೇಜು ಬಳಿ ಹಾಗೂ ಕಂದಾವರ ಗ್ರಾಮದ ಅದ್ಯಪಾಡಿ ದ್ವಾರದ ಬಳಿ ಗಾಂಜಾ ಸೇವನೆ ಮಾಡುತ್ತಿದ್ದ ಬಡಗುಳಿಪಾಡಿ ಗ್ರಾಮದ ನಿವಾಸಿ ರಾಹಿಲ್ ಮೊಹಿದ್ದೀನ್ ಶರೀಫ್, ಮೂಡುಪೆರಾರ ಗ್ರಾಮದ ಗುರುಕಂಬಳದ ನಿವಾಸಿ ಮುಲ್ಲಾ ಅಬ್ದುಲ್ ಅಮನ್ ಮತ್ತು ಕಂದಾವರ ಗ್ರಾಮದ ನಿವಾಸಿ ಮೊಹಮ್ಮದ್ ಶಾಹಿನ್ ಎಂಬವರನ್ನು ವಶಕ್ಕೆ ಪಡೆದು ಇವರ ವಿರುದ್ಧ ಸಹ ಬಜಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ.