-->
1000938341
ಮಂಗಳೂರು: ಪಂಚರಾಜ್ಯ ಚುನಾವಣೆಯಲ್ಲಿ ಸೋಲಿನ‌ ಭೀತಿಯಲ್ಲಿ ಬಿಜೆಪಿಯಿಂದ ಕಾಂಗ್ರೆಸ್ ಗೆ ಮಸಿ ಬಳಿಯುವ ಯತ್ನ‌ - ಸಚಿವ ದಿನೇಶ್ ಗುಂಡೂರಾವ್

ಮಂಗಳೂರು: ಪಂಚರಾಜ್ಯ ಚುನಾವಣೆಯಲ್ಲಿ ಸೋಲಿನ‌ ಭೀತಿಯಲ್ಲಿ ಬಿಜೆಪಿಯಿಂದ ಕಾಂಗ್ರೆಸ್ ಗೆ ಮಸಿ ಬಳಿಯುವ ಯತ್ನ‌ - ಸಚಿವ ದಿನೇಶ್ ಗುಂಡೂರಾವ್

ಮಂಗಳೂರು: ಬಿಜೆಪಿ ಮುಖಂಡರಿಗೆ ಆಧಾರ ರಹಿತ ಆರೋಪ ಮಾಡುವುದು ಒಂದು ಚಾಳಿ‌. ಪಂಚರಾಜ್ಯ ಚುನಾವಣೆಯಲ್ಲಿ ಸೋಲಿನ‌ ಭೀತಿ ಅವರನ್ನು ಕಾಡ ತೊಡಗಿದೆ. ಕರ್ನಾಟಕದಲ್ಲಿ ಧೂಳೀಪಟ ಆಗಿದ್ದಾರೆ. ಕರ್ನಾಟಕದಲ್ಲಿ ಯಾವ ರೀತಿ‌ ಆಡಳಿತ ಕೊಟ್ಟಿದ್ದಾರೆ ಎಂಬುದು ಇಡೀ ದೇಶಕ್ಕೆ ಗೊತ್ತಿದೆ.‌ ಕರ್ನಾಟಕವನ್ನು ಎಟಿ‌ಎಂಗಿಂತ‌ ಕಡೆಯಾಗಿ ದುರುಪಯೋಗಿಸಿದ್ದಾರೆಂದು ಜನ ನೋಡಿದ್ದಾರೆ ಎಂದು ಮಂಗಳೂರಿನಲ್ಲಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಪಂಚರಾಜ್ಯ ಚುನಾವಣೆಗೆ ಕರ್ನಾಟಕವನ್ನು ಕಾಂಗ್ರೆಸ್ ಎಟಿಎಂ ಆಗಿ ಬಳಸಿರುವ ಆರೋಪದ ಹಿನ್ನೆಲೆಯಲ್ಲಿ ಮಾತನಾಡಿದ ಅವರು, ಪಂಚರಾಜ್ಯದ ಚುನಾವಣೆಯಲ್ಲಿ ಬಿಜೆಪಿಗೆ ಸೋಲಿನ ಭೀತಿಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ಗೆ ಮಸಿ ಬಳಿಯುವ ಯತ್ನ‌ ಮಾಡುತ್ತಿದ್ದಾರೆ. ಸುಳ್ಳಿನ‌ ಆರೋಪ ಮಾಡುತ್ತಿದ್ದಾರೆ. ಐ ಟಿ, ಸಿಬಿಐ ಎಲ್ಲಾ ಸಂಸ್ಥೆಗಳು ಅವರ ಕೈಯಲ್ಲೇ ಇದೆ. ಐ ಟಿ, ಸಿಬಿಐ ಅವರ ನಿರ್ದೇಶನದಂತೆ‌ ನಡೆಯುತ್ತಿದ್ದಾರೆ. ಬಿಜೆಪಿ ಆಡಳಿತ ಸಂದರ್ಭ ಅವರ ಮುಖಂಡರ ಮೇಲೆ ಐಟಿ, ಸಿಬಿಐ ದಾಳಿ ನಾವು‌ ನೋಡಿಲ್ಲ.‌ ಐ ಟಿ ರೈಡ್ ಬಗ್ಗೆ ಸಿಬಿಐ ತನಿಖೆಗೆ ಅವರು ಒತ್ತಾಯಿಸುತ್ತಿದ್ದಾರೆ. ಸಿಬಿಐಗೆ ಐಟಿ‌ ಅವರೆ ಪ್ರಕರಣವನ್ನು ನೀಡಬೇಕು. ರೈಡ್ ಸಂದರ್ಭ ಯಾರಲ್ಲಿ ಹಣ ಸಿಕ್ಕಿದೆ ಅವರು ಯಾರೂ ಕಾಂಗ್ರೆಸ್ ನವರಲ್ಲ. ಯಾರೇ ತಪ್ಪು‌ಮಾಡಿದರೆ ಅವರ ವಿರುದ್ಧ ಕ್ರಮ ಆಗಲಿ. ಅದನ್ನು ಸ್ವಾಗತಿಸುತ್ತೇವೆ. 

ನಮಗೆ ಆಪರೇಷನ್ ಹಸ್ತ ಮಾಡುವ ಅವಶ್ಯಕತೆಯಿಲ್ಲ. ನಮ್ಮ‌ ಪಕ್ಷಕ್ಕೆ ಸ್ವಯಂ ಪ್ರೇರಣೆ ಬಂದರೆ ಅವರ ಜೊತೆ‌ ಮಾತನಾಡ ಬಹುದು. ಯಾವುದೇ ಪಕ್ಷವನ್ನು ಒಡೆಯುವ ಯವುದೇ ಅವಶ್ಯಕತೆ‌ ನಮಗಿಲ್ಲ.‌ ಜೆಡಿಎಸ್ ನಿಂದ‌ ಎಷ್ಟು ಜನ‌ ಬರ್ತಾರೆ ಗೊತ್ತಿಲ್ಲ. ಆ ಪಕ್ಷದಲ್ಲಿ‌ ಆಗುತ್ತಿರುವ ಬೆಳವಣಿಗೆ ಬಗ್ಗೆ ಸಮಾಧಾನ ಇಲ್ಲದಿರಬಹುದು. ಆಪರೇಷನ್ ಕಮಲ‌ ಮಾಡಿದವರು ಯಾರು?.‌‌ ಎಷ್ಟು ಕೆಟ್ಟರೀತಿಯಲ್ಲಿ ವ್ಯವಸ್ಥೆ ಹಾಳು ಮಾಡುದರು ಎಂಬುದನ್ನಿಲು ಇಡೀ ದೇಶ ನೋಡಿದೆ. ಹಣಕೊಟ್ಟು, ಬೆದರಿಸಿ ಆಪರೇಷನ್ ‌ಮಾಡೋದ್ರಲ್ಲಿ ಬಿಜೆಪಿ ಅವರು ಎಕ್ಸ್ ಪರ್ಟ್ಸ್ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಮಂಗಳಾದೇವಿ ದೇವಸ್ಥಾನದಲ್ಲಿ ವ್ಯಾಪಾರ ಧರ್ಮದಂಗಲ್ ವಿಚಾರದಲ್ಲಿ ಸಚಿವ ದಿನೇಶ್ ಗುಂಡೂರಾವ್ ಮಾತನಾಡಿ, ವ್ಯಾಪಾರ ಬಹಿಷ್ಕಾರದ ಬಗ್ಗೆ ಅಧಿಕಾರಿಗಳ ಜೊತೆ ಚರ್ಚಿಸಿದ್ದೇನೆ. ಸಂವಿಧಾನದ ಪ್ರಕಾರ ದೇಶ ನಡೆಯಬೇಕು. ಯಾವುದೋ ಧರ್ಮದ ಪ್ರಕಾರ ಅಲ್ಲ. ಎಲ್ಲರಿಗೂ ಸಮಾನ ಹಕ್ಕುಗಳು ಈ ದೇಶದಲ್ಲಿ ಇರಬೇಕು. ವ್ಯಾಪಾರಕ್ಕೆ ಯಾರನ್ನೂ ನಿರ್ಬಂಧನೆ ಮಾಡುವುದು ಸರಿಯಲ್ಲ ಎಂದರು.

ಕಾನೂನು ಪ್ರಕಾರ ಮಾಡಲಿ, ಕಾನೂನು ಬಿಟ್ಟು ಏನನ್ನೂ ಮಾಡಬಾರದು.‌ಅವರು ಕರೆ ಕೊಡಲಿ, ಅವರ ಕರೆಯನ್ನು ಯಾರೂ ಒಪ್ಪಿಕೊಳ್ಳಬೇಕಿಲ್ಲ.‌ ಆ ಕರೆಗಳಿಗೆ ಯಾವುದೇ ಕಾನೂನಿನ ಹಿನ್ನೆಲೆಯಿಲ್ಲ. ಅವರಿಗೆ ಈ ಥರ ವಿಚಾರ ಇಟ್ಟುಕೊಂಡು ಜನರಲ್ಲಿ ಗೊಂದಲ ಮೂಡಿಸಬೇಕು. ಅವರ ರಾಜಕಾರಣ ಇದರಲ್ಲೇ ಇರೋದು, ಧಾರ್ಮಿಕ ರಾಜಕಾರಣ ಬಿಜೆಪಿ ಮಾಡುತ್ತದೆ. ನಾನು ಈ ಬಗ್ಗೆ ಅಧಿಕಾರಿಗಳನ್ನು ಕರೆದು ಮಾತನಾಡ್ತೇನೆ ಎಂದರು.

Ads on article

Advertise in articles 1

advertising articles 2

Advertise under the article