-->
ಇಸ್ರೇಲ್ ಗೆ ಗೂಢಚರ್ಯೆ ಆರೋಪ - ಭಾರತೀಯ ನೌಕಾಪಡೆಯ ಎಂಟು ಮಾಜಿ ಅಧಿಕಾರಿಗಳಿಗೆ ಕತರ್ ನಲ್ಲಿ ಮರಣದಂಡನೆ ಶಿಕ್ಷೆ

ಇಸ್ರೇಲ್ ಗೆ ಗೂಢಚರ್ಯೆ ಆರೋಪ - ಭಾರತೀಯ ನೌಕಾಪಡೆಯ ಎಂಟು ಮಾಜಿ ಅಧಿಕಾರಿಗಳಿಗೆ ಕತರ್ ನಲ್ಲಿ ಮರಣದಂಡನೆ ಶಿಕ್ಷೆ


ಹೊಸದಿಲ್ಲಿ: ಇಸ್ರೇಲ್ ಗಾಗಿ ಗೂಢಚರ್ಯೆ ಮಾಡಿದ್ದಾರೆಂಬ ಆರೋಪಿಗಳಾದ ಭಾರತೀಯ ನೌಕಾಪಡೆಯ ಎಂಟು ಮಾಜಿ ಅಧಿಕಾರಿಗಳಿಗೆ ಕತರ್ ನಲ್ಲಿ ಮರಣದಂಡನೆ ಶಿಕ್ಷೆ ವಿಧಿಸಲಾಗಿದೆ. 

ಕ್ಯಾಪ್ಟನ್ ನವತೇಜ್ ಸಿಂಗ್ ಗಿಲ್, ಕ್ಯಾಪ್ಟನ್ ಬಿರೇಂದ್ರ ಕುಮಾರ್ ವರ್ಮ, ಕ್ಯಾಪ್ಟನ್ ಸೌರಭ್ ವಸಿಷ್ಠ, ಕಮಾಂಡರ್ ಅಮಿತ್ ನಾಗ್ವಾಲ್, ಕಮಾಂಡರ್ ಪೂರ್ಣೇಂದು ತಿವಾರಿ, ಕಮಾಂಡರ್ ಸುಗುಣಕ‌ ಪಕಲ, ಕಮಾಂಡರ್ ಸಂಜೀವ್ ಗುಪ್ತಾ ಮತ್ತು ಸೈಲ‌ ರಾಗೇಶ್ ದೋಷಿಗಳೆಂದು ಘೋಷಿತರಾಗಿ ಮರಣದಂಡನೆಗೆ ಗುರಿಯಾದವರು.

ಶಿಕ್ಷೆಗೆ ಗುರಿಯಾಗಿರುವ ಮಾಜಿ ನೌಕಾಪಡೆಯ ಅಧಿಕಾರಿಗಳು ಹಿಂದೆ ಉನ್ನತ ಹುದ್ದೆಯನ್ನು ಹೊಂದಿದ್ದರು. ಸದ್ಯ ದಹ್ರಾ ಗ್ಲೋಬಲ್ ಟೆಕ್ನಾಲಜೀಸ್ ಆ್ಯಂಡ್ ಕನ್ಸಲ್ವೆನ್ಸಿ ಸರ್ವಿಸ್ ಸಂಸ್ಥೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಕತರ್ ಸೇನಾ ಪಡೆಗಳಿಗೆ ತರಬೇತಿ ಮತ್ತಿತರ ಸೇವೆಗಳನ್ನು ಈ ಖಾಸಗಿ ಸಂಸ್ಥೆ ಒದಗಿಸುತ್ತಿದೆ. ಈ ಎಂಟು ಮಂದಿಯಲ್ಲಿ ಕೆಲವರು ಅತಿ ಸೂಕ್ಷ್ಮವೆಂದು ತಿಳಿಯಲಾದ ಕತರ್ ಸಬಮೆರೈನ್ ಯೋಜನೆಯಲ್ಲಿ ಕೆಲಸ ಮಾಡುತ್ತಿದ್ದರು.

ಎಂಟು ಮಂದಿಯೂ 2022ರ ಆಗಸ್ಟ್ ನಿಂದ ಕತರ್ ಜೈಲಿನಲ್ಲಿದ್ದಾರೆ. ಅವರ ಬಿಡುಗಡೆಗಾಗಿ ಭಾರತ ಸರ್ಕಾರ ಶ್ರಮಿಸುತ್ತಿತ್ತು. ಈ ಮಾರ್ಚ್ ತಿಂಗಳಲ್ಲಿ ಅವರ ವಿಚಾರಣೆ ನಡೆದಿತ್ತು. ಅವರ ಜಾಮೀನು ಅರ್ಜಿಗಳು ಹಲವು ಬಾರಿ ತಿರಸ್ಕೃತಗೊಂಡಿದ್ದವು. ಅವರ ಬಂಧನದ ಅವಧಿ ವಿಸ್ತರಣೆಗೊಂಡಿತ್ತು. ಇಂದು ಕತರ್ ನ ಕೋರ್ಟ್ ಆಫ್ ಫಸ್ಟ್ 2 ಇನ್ಸೆನ್ಸ್ ತೀರ್ಪು ಪ್ರಕಟಿಸಿ ಮರಣದಂಡನೆ ಘೋಷಿಸಿದೆ.

ಇದೀಗ ಈ ತೀರ್ಪನ್ನು ಆಘಾತಕಾರಿ ಎಂದು ಹೇಳಿರುವ ಭಾರತದ ವಿದೇಶಾಂಗ ಸಚಿವಾಲಯ ಈ ಪ್ರಕರಣದ ವಿಚಾರಣೆಯ ಗೌಪ್ಯತೆಗೆ ಸಂಬಂಧಿಸಿದಂತೆ ತಾನು ಈ ಕುರಿತು ಹೆಚ್ಚಿನ ಪ್ರತಿಕ್ರಿಯೆ ನೀಡುವುದಿಲ್ಲವೆಂದು ಹೇಳಿ ಈ ತೀರ್ಪನ್ನು ಪ್ರಶ್ನಿಸುವುದಾಗಿ ತಿಳಿಸಿದೆ.

ತೀರ್ಪಿನಿಂದ ಆಘಾತವಾಗಿದೆ ಹಾಗೂ ತೀರ್ಪಿನ ವಿಸ್ಕೃತ ಪ್ರತಿಗಾಗಿ ಕಾಯಲಾಗುತ್ತಿದೆ. ಶಿಕ್ಷೆ ವಿಧಿಸಲ್ಪಟ್ಟವರ ಕುಟುಂಬಗಳೊಂದಿಗೆ ಸಂಪರ್ಕದಲ್ಲಿದ್ದೇವೆ ಹಾಗೂ ಕಾನೂನು ಹೋರಾಟದ ಎಲ್ಲಾ ಆಯ್ಕೆಗಳನ್ನು ಪರಿಗಣಿಸುತ್ತಿದ್ದೇವೆ. ಈ ಪ್ರಕರಣವನ್ನು ಗಂಭೀರವಾಗಿ ಪರಾಮರ್ಶಿಸಲಾಗುತ್ತಿದೆ,'' ಎಂದು ವಿದೇಶಾಂಗ ಸಚಿವಾಲಯ ಹೇಳಿದೆ. ಕತ‌ರ್ ಅಧಿಕಾರಿಗಳೊಂದಿಗೂ ಚರ್ಚಿಸಲಾಗುವುದು ಎಂದು ಸಚಿವಾಲಯ ಹೇಳಿದೆ.

Ads on article

Advertise in articles 1

advertising articles 2

ಉಚಿತವಾಗಿ ಸುದ್ದಿ ಕೊಡುತ್ತಿರುವ ನಮಗೆ ಸಹಾಯ ಮಾಡಿ

  

Pay Rs 100

  

Advertise under the article