-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಮಂಗಳಾದೇವಿ ನವರಾತ್ರಿ ಉತ್ಸವ- ಜಾತ್ರೆ ವ್ಯಾಪಾರಿಗಳಿಗೆ ಬದುಕುವ ಗ್ಯಾರಂಟಿ ಕೊಡಿ - ಬಿ.ಕೆ ಇಮ್ತಿಯಾಝ್

ಮಂಗಳಾದೇವಿ ನವರಾತ್ರಿ ಉತ್ಸವ- ಜಾತ್ರೆ ವ್ಯಾಪಾರಿಗಳಿಗೆ ಬದುಕುವ ಗ್ಯಾರಂಟಿ ಕೊಡಿ - ಬಿ.ಕೆ ಇಮ್ತಿಯಾಝ್


ಮಂಗಳೂರು : ದೇಶದ ಸಂವಿಧಾನ ಎಲ್ಲರಿಗೂ ಬದುಕುವ ಹಕ್ಕನ್ನು ನೀಡಿದೆ ಆದರೆ ಮಂಗಳೂರಿನಲ್ಲಿ ಜಾತ್ರೆ ವ್ಯಾಪಾರವನ್ನೇ ನಂಬಿಕೊಂಡು ಬದುಕುವ ಜಾತ್ರೆ ವ್ಯಾಪಾರಿಗಳಿಗೆ ವ್ಯಾಪಾರದ ಹಕ್ಕನ್ನು ನಿರಾಕರಿಸಲಾಗಿದೆ ಬಿಜೆಪಿ ಸರಕಾರದ ಕಾಲಕ್ಕಿಂತಲೂ ಕಟುವಾದ ಪರಿಸ್ಥಿತಿ ನಿರ್ಮಾಣ ಆಗಿದ್ದು ರಾಜ್ಯದ ಕಾಂಗ್ರೆಸ್ ಸರಕಾರ ಅನೇಕ ಗ್ಯಾರೆಂಟಿಗಳನ್ನು ಕೊಟ್ಟಿದೆ ಜಾತ್ರೆ ವ್ಯಾಪಾರಿಗಳಿಗೆ ಬದುಕುವ ಗ್ಯಾರೆಂಟಿ ಕೊಡಿ ಎಂದು ಡಿವೈಎಫ್ಐ ಜಿಲ್ಲಾಧ್ಯಕ್ಷ, ಬೀದಿಬದಿ ವ್ಯಾಪಾರಸ್ಥರ ಸಂಘದ ಗೌರವಧ್ಯಕ್ಷರಾದ ಬಿ.ಕೆ ಇಮ್ತಿಯಾಝ್ ಆಗ್ರಹಿಸಿದರು. 
ಅವರು ಇಂದು ನಗರದ ಪುರಭವನದ ಬಳಿ ನಿರ್ದಿಷ್ಟ ಧರ್ಮದ ಜಾತ್ರೆ ವ್ಯಾಪಾರಿಗಳಿಗೆ ಶ್ರೀ ಮಂಗಳಾದೇವಿ ದೇವಸ್ಥಾನದ ನವರಾತ್ರಿ ಉತ್ಸವದ ಜಾತ್ರೆಯಲ್ಲಿ ಅವಕಾಶ ನಿರಾಕರಣೆಯ ವಿರುದ್ಧ ನಡೆದ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದರು. ಹಿಂದೂ ಧಾರ್ಮಿಕ ಕಾಯಿದೆಯನ್ನು ಗೌರವಿಸುತ್ತೇವೆ ಅದೇ ಸಮಯದಲ್ಲಿ ಕರ್ನಾಟಕ ಮುನ್ಸಿಪಲ್ ಕಾಯಿದೆ ಮತ್ತು ಬೀದಿಬದಿ ವ್ಯಾಪಾರದ ಕಾಯಿದೆಯ ಉಲ್ಲಂಘನೆ ಮಾಡುವುದನ್ನು ವಿರೋಧಿಸುತ್ತೇವೆ. ಧರ್ಮದ ಹೆಸರಲ್ಲಿ ದ್ವೇಷ ಹರಡಲು ಬಿಡುವುದಿಲ್ಲ ಎಂದರು.

ಜಾತ್ರೆ ವ್ಯಾಪಾರಸ್ಥರ ಸಮನ್ವಯ ಸಮಿತಿಯ ಗೌರವಧ್ಯಕ್ಷರಾದ ಸುನಿಲ್ ಕುಮಾರ್ ಬಜಾಲ್ ಮಾತನಾಡುತ್ತಾ ದಸರಾ ಎಲ್ಲರೂ ಸೇರಿ ಮಾಡುವಂಥ ನಾಡ ಹಬ್ಬ. ಧರ್ಮದ ಹೆಸರಲ್ಲಿ ಬಡವರ ಹೊಟ್ಟೆಗೆ ಹೊಡೆಯುವುದು ಅಧರ್ಮ. ಸಂಘ ಪರಿವಾರ ಪ್ರಾಯೋಜಿತ  ಕೆಲವು ಹಿತಾಸಕ್ತಿಗಳು ಬಡವರ ಮಧ್ಯೆ ದ್ವೇಷ ಹರಡುತ್ತಿದೆ ಶ್ರೀಮಂತರ ಜೊತೆಯಲ್ಲಿ ನೇರ ವ್ಯವಹಾರ ಮಾಡುತ್ತಿದೆ. ಸಂಘ ಪರಿವಾರದ ಕಿಡಿಗೇಡಿ ಕೃತ್ಯಗಳನ್ನು ಕಾಂಗ್ರೆಸ್ ಸರಕಾರ ಮೂಕಪ್ರೇಕ್ಷಕರತೆ ನೋಡುತ್ತಿದೆ.  ಮುಸ್ಲಿಮರಿಗೆ ವ್ಯಾಪಾರ ಮಾಡಲು ಅವಕಾಶ ನೀಡಬಾರದೆನ್ನಲು ಹಿಂದೂ ಸನಾತನ ಜಾತ್ರೆ ವ್ಯಾಪಾರಿ ಸಂಘಕ್ಕೆ ಏನು ಸಂವಿಧಾನಿಕ ಹಕ್ಕಿದೆ ಎಂದು ಪ್ರಶ್ನಿಸಿದ ಅವರು ಮುಸ್ಲಿಂ ವ್ಯಾಪಾರಿಗಳಿಗೂ ಜಾತ್ರೆ ವ್ಯಾಪಾರ ನಡೆಸಲು ಹಕ್ಕಿದೆ ಎಂದು ಅವರು ಹೇಳಿದರು.

 ಸಿಪಿಐಮ್ ಜಿಲ್ಲಾ ಕಾರ್ಯದರ್ಶಿ ಕೆ ಯಾದವ ಶೆಟ್ಟಿ,ಸಾಮಾಜಿಕ ಹೋರಾಟಗಾರ್ತಿ ಸಾಮರಸ್ಯ ಸಂಘಟನೆಯ ಮಂಜುಳಾ ನಾಯಕ್, ಡಿವೈಎಫ್ಐ ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್ ಮಾತನಾಡಿದರು. ವಿವಿಧ ಸಂಘಟನೆಗಳ ಮುಖಂಡರಾದ ಮೊಹಮ್ಮದ್ ಮುಸ್ತಫಾ, ಹರೀಶ್ ಪೂಜಾರಿ ಬೋಂದೆಲ್, ಪ್ರವೀಣ್ ಕುಮಾರ್ ಕದ್ರಿ, ಶಿವಪ್ಪ, ಮನೋಜ್ ವಾಮಂಜೂರು, ಯೋಗೀಶ್ ಜಪ್ಪಿನಮೊಗರು, ನವೀನ್ ಕೊಂಚಾಡಿ, ಆಸೀಫ್ ಬಾವ ಉರುಮನೆ, ರಫೀಕ್ ಹರೇಕಳ, ಅಸುಂತ ಡಿಸೋಜಾ,ರಹಿಮಾನ್ ಅಡ್ಯಾರ್,ರಿಯಾಜ್ ಎಲ್ಯರ್ ಪದವು ಮುಂತಾದವರು ಉಪಸ್ಥಿತರಿದ್ದರು.


Ads on article

🎁 Amazon Prime ಸದಸ್ಯರಾಗಿರಿ

Amazon Prime Offer
👉 ಉಚಿತ shipping, Prime Video, shopping deals—all in one!

Disclosure: ಈ ಲಿಂಕ್ Amazon Affiliate Program ನ ಭಾಗವಾಗಿದೆ. ನೀವು ಈ ಲಿಂಕ್ ಮೂಲಕ Prime ಸದಸ್ಯರಾಗಿದರೆ, ನಮಗೆ commission ಸಿಗಬಹುದು.

Advertise in articles 1

advertising articles 2

Advertise under the article