-->
ಮಂಗಳೂರು: ಕೇರಳದಲ್ಲಿ ಭಾರೀ ಸ್ಫೋಟ ಕರ್ನಾಟಕ ಗಡಿಯಲ್ಲಿ ಅಲರ್ಟ್ ಗೆ ಸೂಚನೆ - ಡಾ.ಜಿ.ಪರಮೇಶ್ವರ್

ಮಂಗಳೂರು: ಕೇರಳದಲ್ಲಿ ಭಾರೀ ಸ್ಫೋಟ ಕರ್ನಾಟಕ ಗಡಿಯಲ್ಲಿ ಅಲರ್ಟ್ ಗೆ ಸೂಚನೆ - ಡಾ.ಜಿ.ಪರಮೇಶ್ವರ್

ಮಂಗಳೂರು: ಕೇರಳ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆದಿರು ಭಾರೀ ಸ್ಫೋಟದ ಹಿನ್ನೆಲೆಯಲ್ಲಿ ಕರ್ನಾಟಕ ಗಡಿಭಾಗದಲ್ಲಿ ಅಲರ್ಟ್ ಇರಲು ಡಿಜಿ, ಐಜಿಯವರಿಗೆ ಸೂಚನೆ ನೀಡಲಾಗಿದೆ. ಅಲ್ಲದೆ ಕೇರಳ ಗಡಿಭಾಗದಲ್ಲಿ ಭದ್ರತೆ, ನಿಗಾ ಹೆಚ್ಚಿಸಲು ಸೂಚನೆ ನೀಡಲಾಗಿದೆ ಎಂದು ಮಂಗಳೂರಿನಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಸರಾ ಸಂದರ್ಭ ಮೈಸೂರು, ಕೊಡಗು ಮಂಗಳೂರಿನಲ್ಲಿ ಬೆದರಿಕೆ ಬಂದಿತ್ತು. ಆದ್ದರಿಂದ ಈ ಮೂರೂ ಕಡೆಗಳಲ್ಲಿ ಭದ್ರತೆ ಹೆಚ್ಚಿಸಿ ಏನು ಕ್ರಮ ಕೈಗೊಳ್ಳಬೇಕಿತ್ತೋ ಅದನ್ನು ತೆಗೆದುಕೊಳ್ಳಲಾಗಿತ್ತು ಎಂದರು.

ಸೈಬರ್ ಕ್ರೈಂ ಹೆಚ್ಚಳ ಹಿನ್ನೆಲೆಯಲ್ಲಿ ಅದನ್ನು ತಹಬದಿಗೆ ತರಲು ಸಾಫ್ಟ್ ವೇರ್ ಒಂದನ್ನು ಅಭಿವೃದ್ಧಿ ಪಡಿಸುತ್ತಿದ್ದೇವೆ. ಅದನ್ನು ನ್ಯಾಷನಲ್, ಇಂಟರ್ನ್ಯಾಷನಲ್ ಸ್ಟ್ಯಾಂಡರ್ಡ್ ನಲ್ಲಿ ಕೊಂಡೊಯ್ಯಲು ಕ್ರಮ ವಹಿಸುತ್ತಿದ್ದೇವೆ ಎಂದರು.

ಪಿಎಸ್ಐ ಹಗರಣ ಬಳಿಕ ಪೊಲೀಸ್ ನೇಮಕಾತಿ ಆಗುತ್ತಿಲ್ಲ‌ ಎಂಬ ಪ್ರಶ್ನೆಗೆ ಸರ್ಕಾರದ ಅಭಿಪ್ರಾಯವನ್ನು ಕೋರ್ಟ್ ಗೆ ತಿಳಿಸಿದ್ದೇವೆ. ಪರೀಕ್ಷೆಯೊಂದಿಗೆ ಇನ್ನಿತರ ಪ್ರಕ್ರಿಯೆಗಳನ್ನು ನಡೆಸಬೇಕೆಂದು ಹೇಳಿದ್ದೇವೆ ಎಂದರು.

ವಿಜಯನಗರ ಜಿಲ್ಲೆಯಲ್ಲಿ ಬಿಜೆಪಿ ಟಿಕೆಟ್ ಹೆಸರಲ್ಲಿ ವಂಚನೆ ಪ್ರಕರಣದ ತನಿಖೆ ಬಗ್ಗೆ ಕೇಳಿದ ಪ್ರಶ್ನೆಗೆ ಮಾತನಾಡಿದ ಅವರು, ಅದನ್ನು ನಮ್ಮ ಎಸ್ಪಿ ಲೆವೆಲ್ ನಲ್ಲಿಯೇ ತನಿಖೆ ಮಾಡುತ್ತೇವೆ ನಮ್ಮ ಪೊಲೀಸರು ಸಮರ್ಥರಿದ್ದಾರೆ, ತನಿಖೆ ಮಾಡುತ್ತಾರೆ ಎಂದು ಡಾ.ಜಿ.ಪರಮೇಶ್ವರ್ ಹೇಳಿದರು.

Ads on article

Advertise in articles 1

advertising articles 2

ಉಚಿತವಾಗಿ ಸುದ್ದಿ ಕೊಡುತ್ತಿರುವ ನಮಗೆ ಸಹಾಯ ಮಾಡಿ

  

Pay Rs 100

  

Advertise under the article